ಶಿವಮೊಗ್ಗ ,ದಾವಣಗೆರೆಯ 95 ಮಂದಿ ಕಾಂಗೋ ದೇಶದಲ್ಲಿ ಆರೆಷ್ಟ್ , ಕಾರಣ ಏನು?

ಕಾಂಗೋ ದೇಶದಲ್ಲಿ ಬಂಧನಕ್ಕೊಳಗಾಗಿರುವ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಭಾರತಕ್ಕೆ ಕರೆತರಲು ಒತ್ತಾಯ ಕಾಂಗೋ ದೇಶದಲ್ಲಿ ಬಂಧನಕ್ಕೊಳಗಾಗಿರುವ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಭಾರತಕ್ಕೆ ಕರೆತರಲು ಒತ್ತಾಯ
ಕಾಂಗೋ ದೇಶದಲ್ಲಿ ಬಂಧನಕ್ಕೊಳಗಾಗಿರುವ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಭಾರತಕ್ಕೆ ಕರೆತರಲು ಒತ್ತಾಯ

ಕಾಂಗೋ ದೇಶದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರ ಬಂಧನ! ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರಕ್ಕೆ ಮನವಿ

ಶಿವಮೊಗ್ಗ: ಗಿಡಮೂಲಿಕೆ ವ್ಯಾಪಾರಕ್ಕಾಗಿ ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶಕ್ಕೆ ತೆರಳಿದ್ದ ಕರ್ನಾಟಕದ ಶಿವಮೊಗ್ಗ (shivamogga) ಹಾಗೂ ದಾವಣಗೆರೆ ಜಿಲ್ಲೆಯ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಅಲ್ಲಿನ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ತಕ್ಷಣ ರಾಜತಾಂತ್ರಿಕ ಮಟ್ಟದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆಯ ರಾಜ್ಯಾಧ್ಯಕ್ಷ ಪುನೀತ್ ಕುಮಾರ್ ಆಗ್ರಹಿಸಿದ್ದಾರೆ.

ಏಜೆಂಟರಿಂದ ವಂಚನೆ ಆರೋಪ

ಶಿವಮೊಗ್ಗ ಜಿಲ್ಲೆಯ ಹಕ್ಕಿಪಿಕ್ಕಿ ಕ್ಯಾಂಪ್‌ನ 70 ಮಂದಿ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿಯ 25 ಮಂದಿ ಸೇರಿದಂತೆ ಒಟ್ಟು 95 ಜನರು ಸುಮಾರು ಮೂರು ತಿಂಗಳ ಹಿಂದೆ ಕಾಂಗೋ ದೇಶಕ್ಕೆ ತೆರಳಿದ್ದರು.

ಗಿಡಮೂಲಿಕೆ ವ್ಯಾಪಾರ ನಡೆಸುವ ಉದ್ದೇಶದಿಂದ ತೆರಳಿದ್ದ ಇವರಿಗೆ ಸ್ಥಳೀಯ ಏಜೆಂಟರು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರತಿಯೊಬ್ಬರಿಂದ ತಲಾ 5 ಲಕ್ಷ ರೂಪಾಯಿ ಹಣ ಪಡೆದು ಪ್ರವಾಸಿ ವೀಸಾದಲ್ಲಿ ಕಾಂಗೋಗೆ ಕರೆದೊಯ್ಯಲಾಗಿತ್ತು. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲಾಗಿದೆ ಎಂದು ಸಂಘಟನೆ ಆರೋಪಿಸಿದೆ.Shivamogga | ನವೆಂಬರ್ 30ರೊಳಗೆ ರೇಷನ್ ಕಾರ್ಡ್ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿಯಿಂದ ಮಹತ್ವದ ಸೂಚನೆ

Advertisement

ಪ್ರವಾಸಿ ವೀಸಾದಲ್ಲಿ ವ್ಯಾಪಾರ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗೋ ದೇಶದ ವಲಸೆ ಅಧಿಕಾರಿಗಳು ಬೆನಿ ಹಾಗೂ ಕಿಸಂಗಾನಿ ನಗರಗಳಲ್ಲಿದ್ದ ಹಕ್ಕಿಪಿಕ್ಕಿ ಸಮುದಾಯದವರನ್ನು ಬಂಧಿಸಿದ್ದಾರೆ. ಬಳಿಕ ಎಲ್ಲರನ್ನೂ ಅಲ್ಲಿನ ರಾಜಧಾನಿ ಕಿನ್ಯಾಸಾಗೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.

ಸುರಕ್ಷತೆ ಬಗ್ಗೆ ಆತಂಕ

ವಿದೇಶದಲ್ಲಿ ಬಂಧನಕ್ಕೊಳಗಾಗಿರುವ 95 ಮಂದಿ ಹಕ್ಕಿಪಿಕ್ಕಿ ಸಮುದಾಯದವರ ಸುರಕ್ಷತೆ ಬಗ್ಗೆ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ಬಂಧಿತರ ಆಹಾರ, ಆರೋಗ್ಯ ಹಾಗೂ ವೈದ್ಯಕೀಯ ನೆರವಿನ ಕುರಿತು ಸೂಕ್ತ ಮಾಹಿತಿ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕೇಂದ್ರ ಸರ್ಕಾರಕ್ಕೆ ಸಂಘಟನೆಯ ಮನವಿ

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆಯ ರಾಜ್ಯಾಧ್ಯಕ್ಷ ಪುನೀತ್ ಕುಮಾರ್, ಕೇಂದ್ರ ಸರ್ಕಾರ ತಕ್ಷಣ ರಾಜತಾಂತ್ರಿಕ ಮಟ್ಟದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.Shivamogga | ಕೇಂದ್ರ ಕಾರಾಗೃಹದ ಕಾಂಪೌಂಡ್ ಮುಂದೆ ಪೊಟ್ಟಣಗಳು ಪತ್ತೆ-ತೆರೆದು ನೋಡಿದ ಕಾರಾಗೃಹ ಸಿಬ್ಬಂದಿಗಳಿಗೆ ಶಾಕ್ 

ಕಾಂಗೋದಲ್ಲಿ ಸಂಕಷ್ಟಕ್ಕೆ ಸಿಲುಕಿರುವ 95 ಜನರ ಸುರಕ್ಷತೆಯನ್ನು ಖಚಿತಪಡಿಸಬೇಕು. ಅವರಿಗೆ ಅಗತ್ಯ ಆಹಾರ ಮತ್ತು ವೈದ್ಯಕೀಯ ನೆರವು ಒದಗಿಸುವಂತೆ ಕ್ರಮ ಕೈಗೊಳ್ಳಬೇಕು. ಗಡಿಪಾರು ಪ್ರಕ್ರಿಯೆಯನ್ನು ಸುಗಮಗೊಳಿಸಿ ಎಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಅಲ್ಲದೆ, ಉದ್ಯೋಗ ಹಾಗೂ ವ್ಯಾಪಾರದ ಆಮಿಷವೊಡ್ಡಿ ಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಿದೇಶಕ್ಕೆ ಕರೆದೊಯ್ದು ವಂಚಿಸಿರುವ ಆರೋಪ ಎದುರಿಸುತ್ತಿರುವ ಏಜೆಂಟರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.Shivamogga | ಸಕ್ರೆಬೈಲಿನಲ್ಲಿ ಏಕಾ ಏಕಿ ಕುಸಿದುಬಿದ್ದ ಆನೆ ಸಾವು!

ವಿದೇಶದಲ್ಲಿ ಬಂಧನಕ್ಕೊಳಗಾಗಿರುವ 95 ಹಕ್ಕಿಪಿಕ್ಕಿ ಸಮುದಾಯದವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ನಟಿ ಸಮಂತಾಗೆ ಗಂಡು ಮಗು ಜನನ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement