ಕೇಂದ್ರ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ? ವಿವರ ನೋಡಿ

TextMaster 02 01 01.43.10 TextMaster 02 01 01.43.10
IMG 20230201 WA0000

ನವದೆಹಲಿ ಡೆಸ್ಕ್:- ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ (Union Budget 2023) ಬಂಪರ್‌ ಘೋಷಣೆ ಮಾಡಿದ್ದು 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಬಜೆಟ್‌ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಯಾವುದಕ್ಕೆ ಎಷ್ಟು?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

Advertisement

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%
15 ಲಕ್ಷ ರೂ. 30%

ಕೃಷಿ ಸಾಲದ ಗುರಿಯನ್ನು ₹20 ಲಕ್ಷ ಕೋಟಿಗೆ ಹೆಚ್ಚಿಸುವುದಾಗಿ ಘೋಷಣೆ

2023ರ ಕೇಂದ್ರ ಬಜೆಟ್ (Union Budget 2023) ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ(agriculture credit) ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದಕ್ಕೆ ಸಂಬಂಧಿಸಿದಂತೆ, ರೋಗ ಮುಕ್ತ ನಾಟಿ ವಸ್ತುಗಳನ್ನು ಅಭಿವೃದ್ಧಿಪಡಿಸಲು ಮತ್ತು ಒದಗಿಸಲು 2,200 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುವುದು. ಅದೇ ವೇಳೆ ಬಜೆಟ್ ಹಂಚಿಕೆ ರೈತ ಕೇಂದ್ರಿತವಾಗಿರುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಕೃಷಿ ಸ್ಟಾರ್ಟಪ್‌ಗಳಿಗೆ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ಹತ್ತಿಯ ಬೆಳವಣಿಗೆ ಮತ್ತು ರಫ್ತು ಹೆಚ್ಚಿಸಲು ರೈತರು, ರಾಜ್ಯ ಮತ್ತು ಕೈಗಾರಿಕೆಗಳ ನಡುವೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

IMG 20230201 WA0000

ರಾಗಿ ಸಂಶೋಧನೆಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಗುರಿಯಾಗಿದೆ. ರಾಗಿಯನ್ನು “ಶ್ರೀ ಅನ್ನ” ಎಂದು ಕರೆಯಲಾಗಿದೆ. ಹೈದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ಅನ್ನು ಶ್ರೇಷ್ಠತೆಯ ಕೇಂದ್ರವನ್ನಾಗಿ ಮಾಡಲಾಗುವುದು. ದೇಶದಾದ್ಯಂತ 63,000 ಕೃಷಿ ಸೊಸೈಟಿಗಳನ್ನು ಗಣಕೀಕರಣಗೊಳಿಸಲು ಬಜೆಟ್‌ನಲ್ಲಿ 2,516 ಕೋಟಿ ರೂ. ಕೃಷಿ ಬೆಳೆಗಳಿಗೆ ಬೃಹತ್ ವಿಕೇಂದ್ರೀಕೃತ ಸಂಗ್ರಹಣೆಯನ್ನು ಸೃಷ್ಟಿಸುವ ಗುರಿಯನ್ನು ಬಜೆಟ್ ಹೊಂದಿದೆ ಎಂದು ವಿತ್ತ ಸಚಿವೆ ಹೇಳಿದ್ದಾರೆ.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಉಪ ಯೋಜನೆಯಾಗಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸಲು ರೂ 6,000 ಕೋಟಿಗಳ ಗುರಿ ಹೂಡಿಕೆಯನ್ನು ನಿಗದಿಪಡಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ, ಈ ಸಂಘಗಳನ್ನು ಹೊಂದಿರದ ಗ್ರಾಮಗಳು ಮತ್ತು ಪಂಚಾಯಿತಿಗಳಲ್ಲಿ ಕೃಷಿ, ಮೀನುಗಾರಿಕೆ ಮತ್ತು ಡೈರಿ ಸಹಕಾರ ಸಂಘಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ₹ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು, ₹ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಹಿಂದಿನ ಬಜೆಟ್‌ನಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಕ್ಕೆ 1.32 ಲಕ್ಷ ಕೋಟಿ ರೂ. ಮೀನುಗಾರಿಕೆಗೆ 2,118 ಕೋಟಿ ರೂ., ಪಶುಸಂಗೋಪನೆ ಮತ್ತು ಹೈನುಗಾರಿಕೆಗೆ 3,919 ಕೋಟಿ ರೂ ಅನುದಾನ ಘೋಷಿಸಲಾಗಿತ್ತು.

ಮಹಿಳೆಯರಿಗೆ ಬಂಬರ್ !

ಮಹಿಳೆಯರಿಗಾಗಿ ಹೊಸ ಉಳಿತಾಯ ಯೋಜನೆ ಜಾರಿಮಾಡಲಾಗಿದೆ.
ಎರಡು ವರ್ಷಗಳ ಠೇವಣಿ -ಶೇಕಡಾ 7.5ರಷ್ಟು ಬಡ್ಡಿ
ಹಿರಿಯ ನಾಗರಿಕರ ಉಳಿತಾಯ ಯೋಜನೆ(ಎಸ್‌ಸಿಎಸ್‌ಎಸ್)ಯಲ್ಲಿ ಹಿರಿಯ ನಾಗರಿಕರ ಗರಿಷ್ಠ ಠೇವಣಿ ಮೊತ್ತ 14ಲಕ್ಷದಿಂದ 30 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಮಂತ್ಲಿ ಇನ್‌ಕಂ ಸ್ಕೀಮ್‌ನಲ್ಲಿ ಹೂಡಿಕೆ ಮೊತ್ತ ನಾಲ್ಕೂವರೆ ಲಕ್ಷದಿಂದ 9ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ವೈಯಕ್ತಿಕ ಖಾತೆ ಮಂತ್ಲಿ ಇನ್‌ಕಂ ಸ್ಕೀಮ್‌ನಲ್ಲಿ ಹೂಡಿಕೆ ಮೊತ್ತ 9 ಲಕ್ಷದಿಂದ 15ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

IMG 20230201 WA0000

ಯಾವುದೆಲ್ಲಾ ದುಬಾರಿ!
ಈ ಬಜೆಟ್ ನಲ್ಲಿ ಚಿನ್ನ, ಬೆಳ್ಳಿ ಪ್ಲಾಟಿನಂ, ಡೈಮೆಂಟ್ ದುಬಾರಿಯಾಗಿದೆ. ಇನ್ನು ಜವಳಿ, ಚಿಮಣಿ,ತಂಬಾಕು ಉತ್ಪನ್ನಗಳು ದುಬಾರಿಯಾಗಲಿದ್ದು ಸಿಗರೇಟ್ ದರ ಏರಿಕೆ ಮಾಡಲಾಗಿದೆ. ರಬ್ಬರ್, ರಬ್ಬರ್ ಉತ್ಪನ್ನಗಳು ಏರಿಕೆ ಕಂಡಿವೆ.
ಸೈಕಲ್, ಬ್ಯಾಟರಿ, ಆಟೋ ಮೊಬೈಲ್, ಟಿವಿ,ದರ ಇಳಿಕೆ ಮಾಡಲಾಗಿದೆ.

ಏನೆಲ್ಲಾ ಘೋಷಣೆ
ವಿವಿಧ ರಾಜ್ಯಗಳಲ್ಲಿ 30 ಸ್ಕಿಲ್ ಇಂಡಿಯಾ ಅಂತರರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ.
ಸರ್ಕಾರವು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0 ಅನ್ನು ಪ್ರಾರಂಭಿಸಲಿದೆ.
ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು,10,000 ಜೈವಿಕ ಸಂಪನ್ಮೂಲ ಕೇಂದ್ರಗಳನ್ನು ಸ್ಥಾಪನೆ.

ಪ್ರಾದೇಶಿಕ ವಾಯು ಸಂಪರ್ಕವನ್ನು ಸುಧಾರಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಹೆಲಿಪಾಡ್‌ಗಳು, ವಾಟರ್ ಏರೋ ಡ್ರೋನ್‌ಗಳು, ಸುಧಾರಿತ ಲ್ಯಾಂಡಿಂಗ್ ಗ್ರೌಂಡ್ ಗಳ ಪುನರುಜ್ಜೀವನಕ್ಕೆ ಆಧ್ಯತೆ.

ಶಾಶ್ವತ ಖಾತೆ ಸಂಖ್ಯೆಯನ್ನು ಹೊಂದಲು ಅಗತ್ಯವಿರುವ ವ್ಯಾಪಾರ ಸಂಸ್ಥೆಗಳಿಗೆ ,ನಿರ್ದಿಷ್ಟಪಡಿಸಿದ ಸರ್ಕಾರಿ ಏಜೆನ್ಸಿಗಳ ಎಲ್ಲಾ ಡಿಜಿಟಲ್ ಸಿಸ್ಟಮ್‌ಗಳಿಗೆ PAN ಅನ್ನು ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆಗಾಗಿ 3 ಶ್ರೇಷ್ಠ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ರಾಜ್ಯ ಸರ್ಕಾರಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲವನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಣೆ
ಸರ್ಕಾರವು 63,000 ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಗಣಕೀಕರಣವನ್ನು ಪ್ರಾರಂಭಿಸಿದೆ
ಇದಕ್ಕಾಗಿ 2,516 ಕೋಟಿ ರೂ.ವ್ಯಯಮಾಡಲಾಗುವುದು.

ಮಕ್ಕಳು ಮತ್ತು ಯುವ ಸಮುದಾಯಕ್ಕಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆ.
ಸ್ಥಳೀಯ ಭೌಗೋಳಿಕತೆ, ಭಾಷೆಗಳಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆ ಮತ್ತು ಸಾಧನ-ಅಜ್ಞೇಯತಾವಾದಿ ಪ್ರವೇಶಕ್ಕೆ ಅನುಕೂಲವಾಗುವಂತೆ ಸ್ಥಾಪಿಸಲಾಗುವುದು.

ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಮುಂದಿನ 3 ವರ್ಷಗಳಲ್ಲಿ ಕೇಂದ್ರವು 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುವ 740 ಶಾಲೆಗಳಿಗೆ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.
ಭದ್ರಾ ಮೇಲ್ಡಂಡೆ ಯೋಜನೆಗೆ 5300 ಕೋಟಿ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ.
ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅವಕಾಶ.

2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ.

11.4 ಕೋಟಿ ರೈತರಿಗೆ ಪಿ ಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ನೆರವು.

2,200 ಕೋಟಿ ರೂಪಾಯಿ ವೆಚ್ಚದಲ್ಲಿ ಹೆಚ್ಚಿನ ಮೌಲ್ಯದ ತೋಟಗಾರಿಕಾ ಬೆಳೆಗಳಿಗೆ ರೋಗ-ಮುಕ್ತ ಗುಣಮಟ್ಟದ ನಾಟಿ ವಸ್ತುಗಳ ಲಭ್ಯತೆಯನ್ನು ಸುಧಾರಿಸಲು ಸರ್ಕಾರವು ಆತ್ಮನಿರ್ಭರ್ ಕ್ಲೀನ್ ಪ್ಲಾಂಟ್ ಕಾರ್ಯಕ್ರಮವನ್ನು ಪ್ರಾರಂಭ.

ಭಾರತೀಯ ರಾಗಿ ಸಂಶೋಧನಾ ಸಂಸ್ಥೆಯನ್ನು ಶ್ರೇಷ್ಠತೆಯ ಕೇಂದ್ರವಾಗಿ ಬೆಂಬಲಿಸಲಾಗುವುದು

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement