ರಾಜ್ಯದಲ್ಲೇ ಕರಾವಳಿ (coastal Karnataka) ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳು ಉತ್ತಮ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಲೆನಾಡು ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದ್ದು ರಾಜ್ಯದ 13 ಜಿಲ್ಲೆಗಳಿಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 19ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಿಕೈನಲ್ಲಿ 235.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಸಿದ್ದಾಪುರ (siddapura) ತಾಲೂಕಿನ ಹಲಗೇರಿ, ವಾಜಗೋಡು, ನೀಲಕುಂದ, ಬಿಳಗಿ, ಶಿವಳ್ಳಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ, ಸುಲಗೋಡು, ಸೋನಲೆ, ನೆರತೂರು, ತ್ರಿಣಿವೆ, ಅರಗ, ಬಿದರಗೋಡು, ಕೂಡುಮಲ್ಲಿಗೆ, ಚಿಕ್ಕಮಗಳೂರು ಜಿಲ್ಲೆಯ ಧಾರೆಕೊಪ್ಪ, ವಿದ್ಯಾರಣ್ಯಪುರ, ಬಣಕಲ್ನಲ್ಲಿ ಉತ್ತಮ ಮಳೆಯಾಗಿದೆ.
ಕೊಡಗು ಜಿಲ್ಲೆಯ ಹಾನಗಲ್ಲು, ಶನಿವಾರಸಂತೆ, ಬೇಲೂರು, ಶೆಟ್ಟಿಗೇರಿ, ಸೋಮವಾರಪೇಟೆ, ಸಕಲೇಶಪುರ ತಾಲೂಕಿನ ಮಳಲಿ, ಬಾಗೆ, ಕುರುಬತ್ತೂರು, ಬೀದರ್ ಜಿಲ್ಲೆಯ ಸಿಂಧೋಳ, ಭಾಲ್ಕಿ, ಕೋಸಂ, ಚಿತ್ತ, ಅಮಲಾಪುರದಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಮತ್ತು ಬೆಳಗಾವಿ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಕೂಡ ಉತ್ತಮ ಮಳೆಯಾಗಿದೆ.
ಇದನ್ನೂ ಓದಿ:- (ಫೋಟೋದ ಮೇಲೆ ಕ್ಲಿಕ್ ಮಾಡಿ)

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮುಂದುವರೆಯಲಿದ್ದು 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಿಗೂ ಕೂಡ ಸಮದ್ರ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಎಲ್ಲಿ ಹೆಚ್ಚು ಮಳೆ( heavy rain)
ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಕಲಬುರಗಿ, ಬೀದರ್, ಯಾದಗಿರಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ಇದನ್ನೂ ಓದಿ:-
ಈ ಪ್ರದೇಶಗಳಲ್ಲಿ ಅಲ್ಪ ಮಳೆ.
ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿವಿಧ ಪ್ರದೇಶಗಳಲ್ಲಿ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ (forecast )ಇಲಾಖೆ ವರದಿ ಮಾಡಿದೆ.
ಕರಾವಳಿಯಲ್ಲಿ ಜಲದಾರೆ ಗುಳೆ ಹೊರಟ ಮೀನುಗಳ ವೀಡಿಯೋ ನೋಡಿ.






