ಅನಂತಕುಮಾರ್ ಹೆಗಡೆ ವಿರುದ್ದ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲು

TextMaster 01 14 12.37.48 TextMaster 01 14 12.37.48

ಕಾರವಾರ:- ಉತ್ತರಕನ್ನಡ ಜಿಲ್ಲಾ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುವೋ ಮೋಟೊ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ಬಾಬ್ರಿ ಮಸೀದಿ ಒಡೆದಂತೆ ಭಟ್ಕಳದ ಚಿನ್ನದಪಳ್ಳಿ ಮಸೀದಿ ಒಡೆಯುತ್ತೇವೆ.

Advertisement

ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಪ್ರಕರಣ ದಾಖಲು ಮಾಡಲಾಗಿದ್ದು ಸೆಕ್ಷನ್ 505 ಹಾಗೂ 153 ಅಡಿಯಲ್ಲಿ ಕುಮಟಾ ಠಾಣೆ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಮಟಾದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆಯವರ ವಿವಾಧಿತ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಪ್ರಕರಣ ದಾಖಲು ಮಾಡಿಕೊಳ್ಳಲಾಗುದ್ದು,ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೂಡಾ ಪ್ರಕರಣ ದಾಖಲಿಸಲು ಆಗ್ರಹಿಸಿದ್ದರು.

ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಭಟ್ಕಳ,ಶಿರಸಿ ಹಾಗೂ ಇತರ ಮಸೀದಿಗಳನ್ನು ಒಡೆಯುವುದಾಗಿ ಹೇಳಿಕೆ ನೀಡಿದ್ದರು.ಸಿಎಂ ಸಿದ್ಧಾರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗಿಸಿದ್ದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ ಮಾಡಿದ ಸಂಸದ ಅನಂತಕುಮಾರ್ ಹೆಗಡೆ ಲೋಕಸಭೆಗೆ ಸ್ಪರ್ಧೆ!?

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement