ರಾಜ್ಯ ರಾಜಕಾರಣಕ್ಕೆ ಹೆಗಡೆ ನಿರೀಕ್ಷೆ! ಹೆಬ್ಬಾರ್ ಎದರು ತೊಡೆ ತಟ್ಟಲಿದ್ದಾರಾ ಹೆಗಡೆ?

Mp Uttrakannada ananthkumar hegde meeting Mp Uttrakannada ananthkumar hegde meeting

ಕಾರವಾರ,ಮಾರ್ಚ25:- ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಈ ಬಾರಿ ಲೋಕಸಭಾ ( Loksabha)ಟಿಕೆಟ್ ಕೈ ತಪ್ಪಿದೆ. ಆದ್ರೆ ಜಿಲ್ಲೆಯಲ್ಲಿ ಅನಂತಕುಮಾರ್ ಹೆಗಡೆ ತನ್ನದೇ ಆದ ಮತ ಬ್ಯಾಂಕ್ ಹೊಂದಿದ್ದಾರೆ. ಈ ಹಿಂದೆ ಹೆಗಡೆ ರವರ ಪರಿಶ್ರಮದಿಂದ ಮೂರು ಶಾಸಕರು ಆಯ್ಕೆಯಾಗಿದ್ದರು. ಹೀಗಾಗಿ ಅನಂತಕುಮಾರ್ ಹೆಗಡೆಯವರನ್ನು ರಾಜ್ಯ ರಾಜಕಾರಣಕ್ಕೆ ಬಿಜೆಪಿ ವರಿಷ್ಠರು ಬಳಸಿಕೊಳ್ಳಲು ಚಿಂತನೆ ನಡೆದಿರುವ ಬಗ್ಗೆ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಅನಂತಕುಮಾರ್ ಹೆಗಡೆ, ದಿವಂಗತ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆ ರವರನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಅಕಾಡಕ್ಕಿಳಿಸುವ ಸಾಧ್ಯತೆಗಳಿವೆ ಎನ್ನುತ್ತದೆ ಬಿಜೆಪಿ ಮೂಲಗಳು.

Advertisement

ಇದನ್ನೂ ಓದಿ:-ತಾಳಗುಪ್ಪ-ಶಿರಸಿ ರೈಲ್ವೆ ಮಾರ್ಗ ಯೋಜನೆ-3.95 ಕೋಟಿ ಬಿಡುಗಡೆ-ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ ವಿಧಾನಸಭಾ ಕ್ಷೇತ್ರದಿಂದ ಕಾಗೇರಿ ಬದಲು ಶಶಿಭೂಷಣ್ ಹೆಗಡೆ , ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಅನಂತಕುಮಾರ್ ಹೆಗಡೆಯವರನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ.

ಸದ್ಯ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿ ಶಿವರಾಮ್ ಹೆಬ್ಬಾರ್ ಇದ್ದರೂ ಕೆಲವೇ ತಿಂಗಳುಗಳಲ್ಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರುವುದು ಬಹುತೇಕ ಕಚಿತವಾಗಿದೆ.

ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಹೆಬ್ಬಾರ್ ರವರನ್ನು ಮರಳಿ ಕರೆತರಲು ವೇದಿಕೆ ಸಿದ್ದವಾಗಿದೆ. ಯಾವುದೇ ಕ್ಷಣದಲ್ಲಿ ಹೆಬ್ಬಾರ್ ಕಾಂಗ್ರೆಸ್ ಸೇರುವುದು ಖಚಿತವಾಗಿದ್ದರಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಅನಂತಕುಮಾರ್ ಹೆಗಡೆ ರವರನ್ನು ಬಿಜೆಪಿ ಅಭ್ಯರ್ಥಿ ಯಾಗಿ ಕಣಕ್ಕಿಳಿಸುವ ಸಾಧ್ಯತೆಗಳಿವೆ. ಆದರೇ ಈ ಬಗ್ಗೆ ಅನಂತಕುಮಾರ್ ಹೆಗಡೆ ಒಪ್ಪಬೇಕಿದೆ.

ಸದ್ಯ ಅನಂತಕುಮಾರ್ ಹೆಗಡೆ ರವರನ್ನು ರಾಜ್ಯ ರಾಜಕಾರಣಕ್ಕೆ ಬಳಸಿಕೊಳ್ಳುವ ಯೋಚನೆ ಬಿಜೆಪಿಗಿದೆ.

ಒಂದುವೇಳೆ ರಾಜ್ಯ ರಾಜಕಾರಣಕ್ಕೆ ಮರಳಿದರೇ ಹೆಬ್ಬಾರ್ ವಿರುದ್ಧ ಅನಂತಕುಮಾರ್ ಹೆಗಡೆ ಸ್ಪರ್ದೆ ಮಾಡುವುದು ಕಚಿತವಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement