ಬೆಂಗಳೂರು:- ಯುಗಾದಿ (Ugadi),ರಂಜಾನ್ ( Ramzan) ಹಬ್ಬದ ನಿಮಿತ್ತ ರಜೆಗೆ ಬೆಂಗಳೂರಿನಿಂದ ತಮ್ಮೂರಿಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತದೆ. ಈ ದಿಶೆಯಲ್ಲಿ KSRTC ಇಲಾಖೆಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ರಜೆ ಯಾವಾಗ:-
ಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ. 13 ಎರಡನೇ ಶನಿವಾರ ರಜೆ ಹಾಗೂ 14 ರಂದು ಭಾನುವಾರದ ರಜೆ ಇದೆ. ಏ.7ರಿಂದ 14ರ ವರೆಗೆ ಒಟ್ಟು 5 ರಜೆಗಳು ಸಿಗಲಿದೆ.
KSRTC ನಿಗಮದಿಂದ ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ.
ಇದನ್ನೂ ಓದಿ:-ದಿಢೀರ್ ಅಂತ ಹೊನ್ನಾವರ ದಲ್ಲಿ 144 section ಜಾರಿ ಯಾಕೆ? ವಿವರ ನೋಡಿ.
ಕೆಎಸ್‌ಆರ್‌ಟಿಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‌ಟಿಸಿಯ 145 ಬಸ್, ಕೆಕೆಆರ್‌ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಕೆಂಪೇಗೌಡ ನಿಲ್ದಾಣ, ಸ್ಯಾಟ್‍ಲೈಟ್ ನಿಲ್ದಾಣ, ಶಾಂತಿನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್ ಸೇವೆ ಮಾಡಲಾಗಿದೆ. ಅಲ್ಲದೇ ನೆರೆರಾಜ್ಯ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ರಜೆ ನಂತರ ಬೆಂಗಳೂರಿಗೆ ತಡರಳುವ ಪ್ರಯಾಣಿಕರಿಗೆ ತಕ್ಕಂತೆ ಬೆಂಗಳೂರು ಮಾರ್ಗಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು ,ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಗಳನ್ನು ಹೆಚ್ಚುವರಿಯಾಗಿ ಬಿಡಲಾಗುತ್ತದೆ.






