Karwar| ಕಾರವಾರ ಜೈಲಿನಲ್ಲಿ ಮತ್ತೆ ಸಿಕ್ತು ಮೊಬೈಲ್ ಹಲವು ವಸ್ತುಗಳು| ದೂರು ದಾಖಲಿಸಿದ ಜೈಲು ಅಧಿಕಾರಿ.
Karwar news 15 december 2025:- ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar )ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್ ಗಳು ಕೈದಿಗಳ ಬಳಿ ಸಿಕ್ಕಿವೆ.
Karwar | ರಾತ್ರೋ ರಾತ್ರಿ ಮತ್ತೆ ಜೈಲಿನಲ್ಲಿ ದಾಂಧಲೆ ಮಾಡಿದ ಕೈದಿಗಳು!
ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ.
ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ ಗಲಾಟೆ ಮಾಡಿದ್ದರು.
Dandeli |ಕಾಳಿ ನದಿಯ ಕಬ್ಬಿಣದ ಬೇಲಿ ದಾಟಿ ಬಂದ ಮೊಸಳೆ ! ವಿಡಿಯೋ ನೋಡಿ
ಜೈಲರ್ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಕಂಪ್ಯೂಟರ್, ಟಿವಿ ಒಡೆದು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಬ್ಯಾರಕ್’ಗಳನ್ನು ಕೂಲಂಕುಶವಾಗಿ ಪರಿಶೀಲಿಸಿದಾಗ ನಿಷೇಧಿತ ವಸ್ತುಗಳು ಮತ್ತೆ ಪತ್ತೆಯಾಗಿವೆ. ಘಟನೆ ಸಂಬಂಧ ಶಹರ ಠಾಣೆಯಲ್ಲಿ ಜೈಲರ್ ದೂರು ದಾಖಲಿಸಿದ್ದಾರೆ.
ಮಂಗಳೂರಿನ ಕೈದಿಗಳ ಸ್ಥಳಾಂತರ:

ಈ ನಡುವೆ ಜೈಲಿನಲ್ಲಿದ್ದು ಗಲಾಟೆಗೆ ಕಾರಣವಾಗಿದ್ದ ಮಂಗಳೂರು ಮೂಲದ ನಾಲ್ವರು ಕೈದಿಗಳನ್ನು ರಾಜ್ಯದ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲಾಗಿದೆ. ಎರಡು ತಿಂಗಳ ಹಿಂದೆ ಮಂಗಳೂರು ಜೈಲ್ ನಿಂದ ನಾಲ್ವರನ್ನು ಕಾರವಾರಕ್ಕೆ ಸ್ಥಳಾಂತರಿಸಲಾಗಿತ್ತು. ಅವರೇ ಗಲಾಟೆಗೆ ಕಾರಣವಾಗಿದ್ದರು ಅವರನ್ನು ಬಳ್ಳಾರಿ, ಬೆಳಗಾವಿ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ.








