Ankola | ದೇವಿ ಸನ್ನಿದಿಯಲ್ಲಿ ಜೋಡೆತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್ ! ಏನಂದ್ರು ಗೊತ್ತಾ?.
Ankola news (19 december 2025):- ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಂಕೋಲ (ankola)ತಾಲೂಕಿನ ಆಂದ್ಲೆ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸುಮಾರು ಒಂದೂವರೆ ತಾಸಿಗೂ ಅಧಿಕ ಕಾಲ ದೇವಿಯಲ್ಲಿ ಪ್ರಶ್ನಾಕಾರ್ಯದಲ್ಲಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ನಂತರ ನಾಗದೇವತೆ ಹಾಗೂ ತುಳಸಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು.
Ankola| ಅಂಕೋಲದಲ್ಲಿ ಬೈಕ್ ನಿಂದ ಪೆಟ್ರೋಲ್ ಕದ್ದ ಕಳ್ಳರು | ವಿಡಿಯೋ ವೈರಲ್
ಪೂಜಾ ಕಾರ್ಯ ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್,“ಐದು ವರ್ಷಗಳ ಹಿಂದೆ ಈ ದೇವಾಲಯಕ್ಕೆ ಬಂದು ನನ್ನ ಕುಟುಂಬದ ಕಾರ್ಯ ಯಶಸ್ವಿಯಾಗಲೆಂದು ಪ್ರಾರ್ಥನೆ ಮಾಡಿದ್ದೆ. ಅದು ಈಡೇರಿದೆ. ಮತ್ತೆ ಇಲ್ಲಿಗೆ ಬರುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ಇಂದು ಮತ್ತೆ ಬಂದಿದ್ದೇನೆ. ಮತ್ತೊಮ್ಮೆ ತಾಯಿ ಜಗದೀಶ್ವರಿ ಆಶೀರ್ವಾದ ಮಾಡಲಿ ಎಂದು ಕೇಳಿಕೊಂಡಿದ್ದೇನೆ” ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧಿಸಿದ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,ನಾನು ಯಾವತ್ತೂ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿ ಆಗಿರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ. ಹೈಕಮಾಂಡ್ ಸಿಎಂ ಪರವಾಗಿ ನಿಂತಿದ್ದರಿಂದಲೇ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಗುಟ್ಟು ಬಿಚ್ಚಿಟ್ಟ ಡಿಕೆ

ಇನ್ನು ತಮ್ಮ ಹಾಗೂ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದವಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿ,
ನಮ್ಮಲ್ಲಿ ಒಪ್ಪಂದವಾಗಿದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ. ನಾವಿಬ್ಬರೂ ಈ ಕುರಿತು ಮಾತನಾಡಿಕೊಂಡಿದ್ದೇವೆ. ಹೈಕಮಾಂಡ್ ಸಹ ಒಪ್ಪಂದಕ್ಕೆ ಒಪ್ಪಿಗೆ ನೀಡಿದೆ ಎಂದು ತಮ್ಮೊಳಗಿನ ಗುಟ್ಟನ್ನು ಹೊರಹಾಕಿದರು.
ಮುಂದೆ ಮುಖ್ಯಮಂತ್ರಿ ಸ್ಥಾನ ಸಂಬಂಧಿಸಿದ ಇಚ್ಛೆ ಹಾಗೂ ಸಮಸ್ಯೆ ಪರಿಹಾರಕ್ಕೆ ದಿನಾಂಕ ನಿಗದಿಯಾಗಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ, ಡಿ.ಕೆ. ಶಿವಕುಮಾರ್ ಮುಗುಳ್ನಗೆ ನಕ್ಕು ಯಾವುದೇ ಉತ್ತರ ನೀಡದೇ ತೆರಳಿದರು.
Karwar | ಸಿಎಂ ಕನಸು ಹೊತ್ತು ಡಿಕೆಶಿ ದೇವಾಲಯ ದರ್ಶನ – ಆಂದ್ಲೆ ಜಗದೀಶ್ವರಿ ದೇವಿಗೆ ವಿಶೇಷ ಪೂಜೆ.
ಒಟ್ಟಿನಲ್ಲಿ ಸಿಎಂ ಸ್ಥಾನದ ಹಗ್ಗ ಜಗ್ಗಾಟದಲ್ಲಿ ಜನವರಿಗೆ ಹೊಸ ಸುದ್ದಿ ನೀಡ್ತಾರ ಡಿಕೆ ಎಂಬುದನ್ನು ಕಾದು ನೋಡಬೇಕಿದೆ.







