Yallapur |ನಿದ್ದೆಗೆ ಜಾರಿದ ಬಸ್ ಚಾಲಕ ಧರೆಗೆ ಡಿಕ್ಕಿ.
Yallapur news :-ಉತ್ತರ ಕನ್ನಡ ಜಿಲ್ಲೆಯಯಲ್ಲಾಪುರ (yallapur)ತಾಲೂಕಿನ ಚವತ್ತಿ–ಉಮ್ಮಚ್ಚಗಿ ರಸ್ತೆಯ ಗೊರ್ಸಗದ್ದೆ ಬಳಿ ಖಾಸಗಿ ಬಸ್ ಒಂದು ಚಾಲಕ ನಿದ್ದೆಗೆ ಜಾರಿದ ಪರಿಣಾಮ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
Yallapur |ನಾಲಿಗೆ ಹಾಗೂ ನಡವಳಿಕೆಯಲ್ಲಿ ಜವಾಬ್ದಾರಿ ಇರಬೇಕು-ಹೆಬ್ಬಾರ್
ಮೈಸೂರಿನಿಂದ ದಾಂಡೇಲಿ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಸುಮಾರು 30 ಮಂದಿ ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ನಿನ್ನೆ ಮೈಸೂರಿನಿಂದ ಹೊರಟ ಬಸ್ ಇಂದು ಯಲ್ಲಾಪುರ ಮಾರ್ಗವಾಗಿ ದಾಂಡೇಲಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ನಿರಂತರವಾಗಿ ಬಸ್ ಚಾಲನೆ ಮಾಡಿದ್ದರಿಂದ ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಸಹಪ್ರಯಾಣಿಕರು ಗಾಯಗೊಂಡವರನ್ನು ರಕ್ಷಣೆ ಮಾಡಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ತಕ್ಷಣವೇ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
