Election:ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್ ಬಳಕೆ -ರಾಜ್ಯಪಾಲರ ಅಂಕಿತ
ಬೆಂಗಳೂರು :-ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ (Election) ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ಗವರ್ನರ್ ಸಹಿ ಹಾಕಿದ್ದಾರೆ.
ಕರ್ನಾಟಕ(Karnataka) ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರ ಅನುಮೋದನೆ ದೊರೆತಿದೆ.
Karnataka| ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆ-ದೆಹಲಿಗೆ 40 ಶಾಸಕರ ಪೆರೆಡ್!
ಗೆಜೆಟ್ ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ,ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿ ಬರಲಿದೆ ಎಂದು ತಿಳಿಸಿದೆ.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗೆ ಮತಯಂತ್ರಗಳಿಗೆ ಕೊಕ್ ನೀಡಲಾಗಿದ್ದು
ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಮತಪತ್ರಗಳನ್ನು ರಾಜ್ಯ ಚುನಾವಣಾ ಆಯೋಗ ಬಳಸಲಿದೆ.
ಭಾರತ ಸಂವಿಧಾನದ 326ನೇ ಅನುಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ವಯಸ್ಕ ಮತಾಧಿಕಾರವನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸುವುದನ್ನು ಖಚಿತಪಡಿಸುವುದು ಈ ತಿದ್ದುಪಡಿಯ ಮುಖ್ಯ ಆಶಯವಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (EVM) ವಿಶ್ವಾಸಾರ್ಹತೆ ಮತ್ತು ಮತದಾರರ ಗೌಪ್ಯತೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕಳವಳಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ನಂಬಿಕೆಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರವು ಸದೃಢವಾದ ರಹಸ್ಯ ಮತಪತ್ರ (Secret Ballot Paper) ಪದ್ಧತಿಗೆ ಮರಳಲು ನಿರ್ಧರಿಸಿದ್ದು ಇದೀಗ ರಾಜ್ಯಪಾಲರ ಅಧಿಕೃತ ಮುದ್ರೆ ಬಿದ್ದಿದೆ.
ಕರ್ನಾಟಕ ರಾಜ್ಯ ಪತ್ರ









