bhatkal| ಬಾವಿಗೆ ಬಿದ್ದ ಚಿರತೆ ರಕ್ಷಣೆ ವಿಡಿಯೋ ನೋಡಿ.
ವಿಡಿಯೋ ನೋಡಿ:-
Bhatkal :- ಆಹಾರ ಅರಸಿಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು ,ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ
ಭಟ್ಕಳ (bhatkal)ತಾಲೂಕಿನ ಯಲ್ವಡಿಕವೂರ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಾರಾಯಣ ನಾಯ್ಕ ಎಂಬುವವರ ಮನೆಯ ಬಾವಿಯಲ್ಲಿ ಚಿರತೆ ಬಿದ್ದಿದ್ದು ,ಚಿರತೆ ಚೀರಾಟದಿಂದ ಬಾವಿ ಇಣುಕಿ ನೋಡಿದಾಗ ಚಿರತೆ ಇರುವುದು ತಿಳಿದಿದ್ದು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಾವಿಗೆ ಬಲೆ ಎಸೆದು ಚಿರತೆಯನ್ನು ಸುರಕ್ಷಿತವಾಗಿ ಮೇಲೆತ್ತಿ ಬೋನಿಗೆ ತುಂಬಿದ್ದಾರೆ. ನಂತರ ಸ್ಥಳೀಯ ಅರಣ್ಯಕ್ಕೆ ಚಿರತೆಯನ್ನು ಬಿಡಲಾಯಿತು.
ರಕ್ಷಣಾ ಕಾರ್ಯಾಚರಣೆ ಹೇಗಿತ್ತು?
ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗೋಕರ್ಣ ತದಡಿಯ ವನ್ಯಜೀವಿ ರಕ್ಷಕರಾದ ಅಶೋಕ ನಾಯ್ಕ, ಮಹೇಶ ನಾಯ್ಕ ಹಾಗೂ ನಾಗರಾಜ ಹರೀಕಾಂತ ಅವರ ತಂಡವೂ ಸ್ಥಳಕ್ಕೆ ಆಗಮಿಸಿ ಅರಣ್ಯ ಸಿಬ್ಬಂದಿಯೊಂದಿಗೆ ಸಮನ್ವಯದಿಂದ ಕಾರ್ಯಾಚರಣೆ ನಡೆಸಿತು.
Karwar|ನಾವು ಬದುಕಿದ್ದೇವೆ ಎಂದು ತೋರಿಸಿಕೊಟ್ಟ ಯುವ ಕಾಂಗ್ರೆಸ್ !
ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚಿರತೆಯನ್ನು ಬಾವಿಯಿಂದ ಮೇಲಕ್ಕೆತ್ತಿ ಬೋನಿನಲ್ಲಿ ಇರಿಸಲಾಯಿತು.
ರಕ್ಷಣಾ ಕಾರ್ಯಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅರಣ್ಯ ಸಿಬ್ಬಂದಿ ಸ್ಥಳೀಯರನ್ನು ಸುರಕ್ಷಿತ ಅಂತರದಲ್ಲಿ ನಿಲ್ಲಿಸಿದರು. ಆದರೂ ಸುದ್ದಿ ತಿಳಿದು ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಜನರು ಆಗಮಿಸಿ ಚಿರತೆಯನ್ನು ನೋಡಲು ಮುಗಿಬಿದ್ದರು.ರಕ್ಷಿಸಲಾದ ಚಿರತೆ ಆರೋಗ್ಯವಾಗಿದ್ದು, ಪ್ರಾಥಮಿಕ ಪರಿಶೀಲನೆಯ ಬಳಿಕ ಅದನ್ನು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಆರ್‌ಎಫ್‌ಒ ವಿಶ್ವನಾಥ ನಾಯ್ಕ ತಿಳಿಸಿದ್ದಾರೆ.
ಇದನ್ನೂ ಓದಿ:-Karwar|ಕೊನೆಗೂ ಕಾರವಾರಿಗರ ಸಮಸ್ಯೆಗೆ ಬೀದಿಗಿಳಿದ ಬಿಜೆಪಿ !
ಈ ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒ ಮಾರುತಿ ಸೋರಗಾಂವಿ, ಫಾರೆಸ್ಟರ್‌ಗಳಾದ ಮಹೇಶ ಅಜ್ಜರ, ನಾಗರಾಜ ನಾಯ್ಕ, ಸಂದೀಪ್ ಭಂಡಾರಿ ಹಾಗೂ ಸಿಬ್ಬಂದಿಗಳಾದ ರಾಮಕೃಷ್ಣ ನಾಯ್ಕ, ಮಾದೇವ ನಾಯ್ಕ, ಕುಪ್ಪಯ್ಯ ಗೊಂಡ, ಮಹೇಶ ನಾಯ್ಕ, ಈಶ್ವರ ನಾಯ್ಕ, ವರುಣ್ ಚೌಹಾಣ್ ಸೇರಿದಂತೆ ಹಲವು ಸಿಬ್ಬಂದಿ ಮತ್ತು ವನ್ಯಜೀವಿ ರಕ್ಷಕರು ಭಾಗವಹಿಸಿದ್ದರು.






