Today news| ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣದ ಪ್ರಮುಖ ಹೈಲೈಟ್ಸ್ ಇಲ್ಲಿದೆ.
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿಗೆ 5 ಪ್ರತ್ಯೇಕ ಪೊಲೀಸ್ ಕಮಿಷನರೇಟ್ ಹುದ್ದೆಗಳನ್ನ ಘೋಷಣೆ ಮಾಡಿದ್ದಾರೆ. ಮಾಣೆಕ್ ಶಾ ಮೈದಾನದಲ್ಲಿಂದು ನಡೆದ 80ನೇ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಿನ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿಗೆ 5 ಪ್ರತ್ಯೇಕ ಕಮಿಷನರೇಟ್ ಹುದ್ದೆಗಳನ್ನ ಘೋಷಿಸಿದರು.
ಇದನ್ನೂ ಓದಿ:-DK ಗೆ ಪಟ್ಟ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾದ ರಾಜಕೀಯ| ಏನದು?
ಬೆಂಗಳೂರಿಗೆ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕಮಿಷನರೇಟ್ ಮಾಡಲಾಗಿತ್ತು. ಈಗ ಅದನ್ನ ವಿಂಗಡಿಸಿ, ಅಗತ್ಯ ಇರುವ ಕಡೆ ಹೊಸ ಪೊಲೀಸ್ ಠಾಣೆಗಳನ್ನ ಸ್ಥಾಪಿಸಿ, ಕಾನೂನು ಸುವ್ಯವಸ್ಥೆಯನ್ನ ಇನ್ನಷ್ಟು ಉತ್ತಮವಾಗಿ ನೋಡಿಕೊಳ್ಳಲು ಸಾಧ್ಯವಾಗುವಂತೆ ಕಾರ್ಯಕ್ರಮ ರೂಪಿಸಿದ್ದೇವೆ. ಜೊತೆಗೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಕೊಡಲು ಜಿಬಿಎ, ಟ್ರಾಫಿಕ್ ಪೊಲೀಸ್ ಠಾಣೆ ವತಿಯಿಂದ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ:-Karnataka| ಜೈಲಲ್ಲಿ ಪ್ರಜ್ವಲ್ ರೇವಣ್ಣನಿಗೆ ರಾಜಾಥಿತ್ಯ-ವಿಡಿಯೋ ವೈರಲ್
ನಾಡಿನ 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸೋಣ. ಸ್ವಾತಂತ್ರ್ಯ ಹೋರಾಟಗಾರರು, ಗಡಿ ಕಾಯುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸುತ್ತಾ, ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವ ಸಂಕಲ್ಪ ನಮ್ಮ ಸರ್ಕಾರದ್ದು. ಪಂಡಿತ್ ಜವಾಹರಲಾಲ್ ನೆಹರೂ ಅವರ ‘ನವ ಭಾರತ’ ಕಲ್ಪನೆಯಂತೆ “ಯುವ ಕರ್ನಾಟಕ – ನವ ಭಾರತ” ಧ್ಯೇಯದೊಂದಿಗೆ, 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತರಲು ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಿ, ಸಚಿವರು ಮತ್ತು ಶಾಸಕರಿಂದ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ:-Karwar| ರಾಜ್ಯದಲ್ಲಿ RSS ಕಾರ್ಯಚಟುವಟಿಕೆಗೆ ಕಡಿವಾಣ- ಅಧಿಕಾರ ಶಾಶ್ವತ ಅಲ್ಲ ಎಂದಿದ್ದೇಕೆ ಸಚಿವ ಲಕ್ಷ್ಮಣ್ ಸವದಿ?
ಸಾಮಾಜಿಕ ಭದ್ರತೆ ನೀಡುತ್ತಿರುವ ಪಂಚ ಗ್ಯಾರಂಟಿಗಳ ಜೊತೆಗೆ, ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು 6ನೇ ಗ್ಯಾರಂಟಿಯಾಗಿ ‘ಭೂ-ಗ್ಯಾರಂಟಿ’ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ₹77,000 ಕೋಟಿಗೂ ಅಧಿಕ ಮೊತ್ತ ನೇರ ವರ್ಗಾವಣೆಯಾಗಿದ್ದು, NFHS-6 ವರದಿಯಂತೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಶೇ.44 ರಿಂದ ಶೇ.14 ಕ್ಕೆ ಇಳಿಕೆಯಾಗಿದೆ. ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಕೋಟ್ಯಂತರ ಜನರಿಗೆ ಆಸರೆಯಾಗಿವೆ. ಇದು ಕರ್ನಾಟಕ ಮಾದರಿ ಎಂದೇ ಜನಪ್ರಿಯವಾಗಿದೆ ಹಾಗೂ ಇಡೀ ರಾಷ್ಟ್ರ ಅನುಸರಿಸುತ್ತಿದೆ. ತಾಯಂದಿರ ಮರಣ ಪ್ರಮಾಣದಲ್ಲಿ ಶೇ.19 ರಷ್ಟು ಇಳಿಕೆ ಕಂಡಿದೆ.
ಇದನ್ನೂ ಓದಿ:-Court news|ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಪೊಲೀಸರು ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯವಲ್ಲ: ಹೈಕೋರ್ಟ್ ಆದೇಶ.
ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಖಾಸಗಿ ಉದ್ಯೋಗಕ್ಕಾಗಿ “ಯುವ ಉದ್ಯೋಗ ಸೇತು” ಹಾಗೂ ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ₹2,500 ಪ್ರೋತ್ಸಾಹಧನ ನೀಡುವ “ಉದ್ಯೋಗ ನಿಧಿ” ಘೋಷಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ 6ನೇ ತರಗತಿಯಿಂದಲೇ AI ಶಿಕ್ಷಣ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ, ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್‌ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ಹಾಗೂ 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲಾಗುತ್ತಿದೆ.
ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ “ಮುಖ್ಯಮಂತ್ರಿ ರೈತ ಚೈತನ್ಯ” ಮತ್ತು ಸಣ್ಣ ರೈತರಿಗೆ ಯಂತ್ರೋಪಕರಣಗಳ ಬಾಡಿಗೆ ಮೇಲೆ 50% ಸಬ್ಸಿಡಿ ನೀಡುವ “ರೈತ ಮಿತ್ರ” ಯೋಜನೆ ಜಾರಿಗೊಳಿಸಲಾಗುವುದು. ಎತ್ತಿನಹೊಳೆ ಯೋಜನೆಯ ಮೊದಲ ಹಂತ ಹಾಗೂ ₹16,000 ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಚಾಲನೆಯಲ್ಲಿವೆ. ಎಸ್‌ಸಿ/ಎಸ್‌ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಬೃಹತ್ ಅನುದಾನ ಮೀಸಲಿಡಲಾಗಿದೆ.
ಬೆಂಗಳೂರಿಗೆ ₹1.50 ಲಕ್ಷ ಕೋಟಿ ಮೂಲಸೌಕರ್ಯ, ₹26,000 ಕೋಟಿ ವೆಚ್ಚದ 117 ಕಿ.ಮೀ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’, 5 ಹೊಸ ಪೊಲೀಸ್ ಕಮಿಷನರೇಟ್‌ಗಳು, ಆ್ಯಂಟಿ ರೌಡಿ ಸ್ಕ್ವಾಡ್, ಲಾಲ್‌ಬಾಗ್ ಮಾದರಿಯ 5 ಬೃಹತ್ ಟ್ರೀ ಪಾರ್ಕ್‌ಗಳು ಹಾಗೂ 7 ಕೆರೆಗಳ ಪುನಃಶ್ಚೇತನ ಕೈಗೆತ್ತಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ₹20,000 ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಅಡಿ 5 ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್‌ಗಳು ಮತ್ತು ‘ಕರ್ನಾಟಕ ರಾಜ್ಯ ಮೋಟಾರು ವಾಹನ ವಿಮಾ ಸಂಸ್ಥೆ’ ಸ್ಥಾಪಿಸಲಾಗುತ್ತಿದೆ. ರಾಜ್ಯದ ಪ್ರತಿಯೊಂದು ಪಟ್ಟಣ ಹಾಗೂ ನಗರದ ಪ್ರಗತಿಗೆ ರಿಂಗ್ ರೋಡ್ ಹಾಗೂ ಮೊಬಿಲಿಟಿ ಗ್ರಿಡ್ ಗಳನ್ನು ನಗರ ಯೋಜನೆಯ ಮೂಲಕ ಜಾರಿಗೆ ತರಲಾಗುವುದು ಎಂದರು.
