Shivamogga Breaking | ವಂದೇ ಮಾತರಂ ಗೀತೆಗೆ ಅವಮಾನ ಆರೋಪ: ಕಾರ್ಯಕ್ರಮದಿಂದ ಹೊರನಡೆದ ಶಾಸಕ ಚನ್ನಬಸಪ್ಪ

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ವಂದೇ ಮಾತರಂ ಗೀತೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ವಂದೇ ಮಾತರಂ ಗೀತೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕ ಎಸ್.ಎನ್. ಚನ್ನಬಸಪ್ಪ
ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ವಂದೇ ಮಾತರಂ ಗೀತೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕ ಎಸ್.ಎನ್. ಚನ್ನಬಸಪ್ಪ
Jayalakshmi Jewellers Sagar Shimoga district
Jay Lakshmi Jewellers Sagar

Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

IMG 20260913 WA0009AddText 09 13 09.07.45AddText 09 13 09.46.05AddText 09 13 10.08.20file 00000000fad48211be1a8340bc6daf8c

Shivamogga Breaking:-ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿ ಹಾಡಿದ ವಿಚಾರಕ್ಕೆ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Advertisement

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

Videoshot 20260915 215152
ವೇದಿಕೆಯಲ್ಲಿ ಡಿ.ಎಸ್.ಎಸ್ ನಿಂದ ಮಾತಿನ ಚಕಮಕಿ

ಕಾರ್ಯಕ್ರಮದ ವೇದಿಕೆಯಲ್ಲೇ ಎದ್ದು ನಿಂತ ಶಾಸಕ ಚನ್ನಬಸಪ್ಪ, ವಂದೇ ಮಾತರಂ ಗೀತೆಗೆ ಪೂರ್ಣ ಗೌರವ ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ರಾಷ್ಟ್ರಭಕ್ತಿಯ ಗೀತೆಯನ್ನು ಸಂಪೂರ್ಣವಾಗಿ ಹಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಈ ವೇಳೆ ಜಿಲ್ಲಾಧಿಕಾರಿಯವರನ್ನೂ ಪ್ರಶ್ನಿಸಿದ ಅವರು, ಕೇಂದ್ರದ ಕಾನೂನು ಹಾಗೂ ಆದೇಶಗಳಿಗೆ ವಿರುದ್ಧವಾಗಿ ರಾಜ್ಯ ಸರ್ಕಾರ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಒಂದು ಕಡೆ ಕೇಂದ್ರದ ಸೂಚನೆ, ಮತ್ತೊಂದೆಡೆ ರಾಜ್ಯದ ಸೂಚನೆ ಪಾಲಿಸಬೇಕಾದ ಪರಿಸ್ಥಿತಿ ಎದುರಾದರೆ ಏನು ಮಾಡಬೇಕು ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟರು.

ಶಾಸಕರ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಡಿಎಸ್ಎಸ್ ಮುಖಂಡರು, ಸರ್ಕಾರದ ನಿರ್ಧಾರದಿಂದ ಅಧಿಕಾರಿಗಳಿಗೆ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಈ ವೇಳೆ ಶಾಸಕ ಚನ್ನಬಸಪ್ಪ ಹಾಗೂ ಡಿಎಸ್ಎಸ್ ಮುಖಂಡರ ನಡುವೆ ಕೆಲಕಾಲ ಮಾತುಕತೆ ನಡೆಯಿತು.

‘ವಂದೇ ಮಾತರಂಗೆ ಗೌರವವಿಲ್ಲದ ವೇದಿಕೆಯಲ್ಲಿ ಇರಲ್ಲ’

ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ವಂದೇ ಮಾತರಂ ಗೀತೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿರುವ ಶಾಸಕ ಎಸ್.ಎನ್. ಚನ್ನಬಸಪ್ಪ
ವೇದಿಕೆಯಿಂದ ಹೊರನೆಡೆದ ಶಾಸಕ ಚಿನ್ನಿ

ವಂದೇ ಮಾತರಂ ಗೀತೆಗೆ ಸೂಕ್ತ ಗೌರವ ನೀಡದ ಕಾರ್ಯಕ್ರಮದಲ್ಲಿ ತಾನು ಮುಂದುವರಿಯುವುದಿಲ್ಲ ಎಂದು ಶಾಸಕ ಚನ್ನಬಸಪ್ಪ ಸ್ಪಷ್ಟಪಡಿಸಿದರು. ಬಳಿಕ ‘ನೀವು ಇರೀ, ನಾನು ಇರಲ್ಲ’ ಎಂದು ಹೇಳಿ ಕಾರ್ಯಕ್ರಮದಿಂದ ಹೊರನಡೆದರು.

ಘಟನೆ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸ್ಥಳದಲ್ಲಿ ಕೆಲಕಾಲ ಚರ್ಚೆ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement