Siddapur| ₹2 ಸಾವಿರ ಕಳ್ಳತನಕ್ಕೆ ಎರಡು ಲಕ್ಷದ ಕಾರಿನಲ್ಲಿ ಬಂದ ಅಂತರ ಜಿಲ್ಲಾ ಕಳ್ಳರು ಲಾಕ್ !

Siddapur Police arrest three inter-district thieves in a house theft case Siddapur Police arrest three inter-district thieves in a house theft case
Siddapur Police arrest three inter-district thieves in a house theft case
kannadavani news banner
ಫೋಟೋ ಮೇಲೆ ಕ್ಲಿಕ್ ಮಾಡಿ ನಮ್ಮ WhatsApp ಗ್ರೂಪ್ ಗೆ join ಆಗಿ.

Siddapur|ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(Siddapur )ತಾಲೂಕಿನ ಹಾಳದಕಟ್ಟಾದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅಂತರ ಜಿಲ್ಲಾ ಕಳ್ಳರ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ಏನು?

ಹಾಳದಕಟ್ಟಾ ಗ್ರಾಮದ ರಾಜು ತಂದೆ ಉಮೇಶ ಜಾಧವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ರಾಜು ಜಾಧವ್ ಅವರು ಸಿದ್ದಾಪುರದ ಹಾಳದಕಟ್ಟಾದಲ್ಲಿರುವ ತಮ್ಮ ಮೂಲ ಮನೆಯಲ್ಲಿ ವಯಸ್ಸಾದ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಸಹೋದರ ವಾಸವಾಗಿದ್ದರು. ಅ.3ರಂದು ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಅವರು ಸಂಜೆ 5 ಗಂಟೆ ಸುಮಾರಿಗೆ ಮನೆಯ ಬಾಗಿಲುಗಳಿಗೆ ಬೀಗ ಹಾಕಿ ತಾಯಿ ಹಾಗೂ ಸಹೋದರನನ್ನು ಕರೆದುಕೊಂಡು ತೊಗರ್ಸಿಗೆ ತೆರಳಿದ್ದರು. ಇದನ್ನೂ ಓದಿ:-Siddapur | ಸೈಡ್ ಕೊಡಲಿಲ್ಲ ಎಂದು ಬಸ್ ಅಡ್ಡಗಟ್ಟಿ ಚಾಲಕ ,ನಿರ್ವಾಹನ ಮೇಲೆ ಹಲ್ಲೆ -ಪ್ರಕರಣ ದಾಖಲು

ಅ.5ರಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮನೆಯ ಸಮೀಪದವರು ಕರೆ ಮಾಡಿ ಮನೆಯ ಬಾಗಿಲು ತೆರೆದಿರುವುದಾಗಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಕಳ್ಳರು ಮನೆಯ ಮುಂದಿನ ಬಾಗಿಲಿನ ಬೀಗವನ್ನು ಆಯುಧದಿಂದ ಮೀಟಿ ತೆರೆದು ಅಕ್ರಮವಾಗಿ ಒಳ ಪ್ರವೇಶಿಸಿದ್ದರು. ಬಳಿಕ ಮನೆಯ ಕೋಣೆಯಲ್ಲಿದ್ದ ಗೋದ್ರೇಜ್‌ನ ಲಾಕ್‌ ಕೂಡ ಮುರಿದು, ಒಳಗೆ ಇರಿಸಲಾಗಿದ್ದ ₹2,000 ನಗದು ಹಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವುದು ಕಂಡುಬಂದಿತ್ತು.

Advertisement

ಈ ಕುರಿತು ರಾಜು ಜಾಧವ್ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.Siddapur | ಐಗೋಡು ರಕ್ಷಿತ ಅರಣ್ಯದಲ್ಲಿ ಬಲಿನೀಡಿ ವಾಮಾಚಾರ! ಶೋಧಕ್ಕಿಳಿದ ಸಿದ್ದಾಪುರ ಪೊಲೀಸರಿಗೆ ಸಿಕ್ಕಿದ್ದೇನು?

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೃಷ್ಣಮೂರ್ತಿ ಜಿ., ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಜೆ.ಬಿ. ಸೀತಾರಾಮ ಅವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ನಾಗಪ್ಪ, ಪಿಎಸ್‌ಐ (ತನಿಖೆ) ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. Siddapur| ಕಾನಸೂರು ವಿದ್ಯಾರ್ಥಿ ಸಾವಿಗೆ ಟ್ವಿಷ್ಟ್ -ಶಿಕ್ಷಕನ ಅಕ್ರಮ ಸಂಬಂಧ ನೋಡಿದ್ದಕ್ಕೆ ಹತ್ಯೆ!? 

ವಿಶೇಷ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಗೊವಿಂದಪ್ಪ (29), ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಚಿಂಚಲಿಯ ಕೃಷ್ಣ (20) ಹಾಗೂ ಹುಬ್ಬಳ್ಳಿಯ ತಾರೆಹಾಳ ರಸ್ತೆಯ ಗಣೇಶ್ (22) ಎಂದು ಗುರುತಿಸಲಾಗಿದೆ. ಇದನ್ನೂ ಓದಿ:-Sirsi | ಅಕ್ರಮ ಶ್ರೀಗಂಧ ಕೆತ್ತನೆ ಪ್ರಕರಣ; 20.5 ಕೆಜಿ ಶ್ರೀಗಂಧ ವಶ, ಓರ್ವ ಆರೋಪಿ ಬಂಧನ

ಆರೋಪಿಗಳಿಂದ ₹330 ನಗದು ಹಾಗೂ ಸುಮಾರು ₹2 ಲಕ್ಷ ಮೌಲ್ಯದ ಸುಜುಕಿ ಸ್ವಿಫ್ಟ್ ಡಿಜೈರ್ ಕಾರನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ನಾಲ್ಕನೇ ಆರೋಪಿ ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಚಿಂಚಲಿಯ ಗಂಗಪ್ಪ ಹಾಗೂ ಐದನೇ ಆರೋಪಿ ಚಿಂಚಲಿಯ ವಡ್ಡರಗಲ್ಲಿಯ ಮಂಜು ಪರಾರಿಯಾಗಿದ್ದಾರೆ. ಇವರ ಪತ್ತೆಗಾಗಿ ಪೊಲೀಸರು ಮುಂದುವರಿದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:-Sirsi |ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ- ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಹಿಳೆ

ಬಂಧಿತ ಆರೋಪಿಗಳು ರೂಢಿಗತ ಅಪರಾಧಿಗಳಾಗಿದ್ದು, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದರೋಡೆ, ಡಕಾಯಿತಿ, ಮನೆ ಕಳ್ಳತನ, ಕುರಿ ಕಳ್ಳತನ ಹಾಗೂ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿದ್ದಾಪುರದಲ್ಲಿ ಸರಣಿ ಕಳ್ಳತನ ನಡೆಸಲು ಬಂದಿದ್ದ ಅಂತರ ಜಿಲ್ಲಾ ಕಳ್ಳರ ಗ್ಯಾಂಗ್‌ ಅನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರನ್ನು ನ್ಯಾಯಾಂಗ ಬಂಧನಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣದ ಕಾರ್ಯಾಚರಣೆಯಲ್ಲಿ ರಮೇಶ ಸಿ. ಕೂಡಲ, ಮಂಜಪ್ಪ ಟಿ., ಚೇತನ ಹಲಗೇರಿ, ರಾಜು ಎಂ., ವಿನಾಯಕ ಮಡಿವಾಳ, ನಾಗರಾಜ ತಿಮ್ಮಾಪುರ, ಮಣಿಕಂಠ ಬಿ.ಎನ್., ಅನೀಲ ನಾಯ್ಕ, ಸಂತೋಷ ತಳವಾರ, ರವಿ ಕ್ಯಾಲಕೊಂಡ, ಹೆಚ್.ಜಿ. ತಿಮ್ಮಪ್ಪ ಗೌಡ ಹಾಗೂ ಪ್ರಶಾಂತ ಅವರು ಭಾಗವಹಿಸಿದ್ದರು.

Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement