ಶಿವಮೊಗ್ಗ ಡಿಸಿ ಕಚೇರಿ ಮುಂದೆ ಹೈಡ್ರಾಮಾ: ಜಮೀನು ಮಂಜೂರಾತಿಗಾಗಿ ಆಲದ ಮರವೇರಿದ ರೈತ!

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮೀನು ಮಂಜೂರಾತಿ ವಿಚಾರವಾಗಿ ಪ್ರತಿಭಟನೆ ನಡೆಸಲು ಆಲದ ಮರವೇರಿದ ರೈತ ನಾಗರಾಜ್. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮೀನು ಮಂಜೂರಾತಿ ವಿಚಾರವಾಗಿ ಪ್ರತಿಭಟನೆ ನಡೆಸಲು ಆಲದ ಮರವೇರಿದ ರೈತ ನಾಗರಾಜ್.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮೀನು ಮಂಜೂರಾತಿ ವಿಚಾರವಾಗಿ ಪ್ರತಿಭಟನೆ ನಡೆಸಲು ಆಲದ ಮರವೇರಿದ ರೈತ ನಾಗರಾಜ್.

ಶಿವಮೊಗ್ಗ ಡಿಸಿ ಕಚೇರಿ ಮುಂದೆ ಹೈಡ್ರಾಮಾ: ಜಮೀನು ಮಂಜೂರಾತಿಗಾಗಿ ಆಲದ ಮರವೇರಿದ ರೈತ!

ವಿಡಿಯೋ ನೋಡಿ:-👇

ಶಿವಮೊಗ್ಗ: ಜಮೀನು ಮಂಜೂರಾತಿ ವಿಚಾರವಾಗಿ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರೊಬ್ಬರು ಶಿವಮೊಗ್ಗ (shivamogga) ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಆಲದ ಮರವೇರಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Advertisement

ಶಿವಮೊಗ್ಗ ತಾಲೂಕಿನ ರಾಮೇನಕೊಪ್ಪ ಗ್ರಾಮದ ರೈತ ನಾಗರಾಜ್ ಪ್ರತಿಭಟನೆ ನಡೆಸಿದವರು. ಜಮೀನು ಮಂಜೂರಾತಿ ಮಾಡಿಕೊಡುವುದಾಗಿ ತಹಶೀಲ್ದಾರ್ ಹಣ ಪಡೆದಿದ್ದಾರೆ. ಆದರೆ ಹಣ ಪಡೆದರೂ ಕೆಲಸ ಮಾಡಿಕೊಟ್ಟಿಲ್ಲ ಎಂದು ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ.Shivamogga: ಭದ್ರಾವತಿ ಯುವಕ ಐಸಿಸ್ ಸಂಪರ್ಕ ಪ್ರಕರಣ ಎನ್‌ಐಎಗೆ ವರ್ಗಾವಣೆ; ಉತ್ತರ ಪ್ರದೇಶದ ಐಸಿಸ್ ಘಟಕದೊಂದಿಗೂ ನಂಟು?

ತಹಶೀಲ್ದಾರ್ ರಾಜೀವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ನಾಗರಾಜ್ ತಹಶೀಲ್ದಾರ್ ಕಚೇರಿಗೂ ಆಗಮಿಸಿದ್ದರು. ಈ ವೇಳೆ ತಮ್ಮ ಸಮಸ್ಯೆಗೆ ಪರಿಹಾರ ಸಿಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಡಿಸಿ ಕಚೇರಿ ಮುಂಭಾಗದಲ್ಲಿ ಮರವೇರಿ ಪ್ರತಿಭಟನೆ ನಡೆಸಿದ್ದಾರೆ.

ರೈತ ನಾಗರಾಜ್ ಅವರೊಂದಿಗೆ ಸುಮಾರು 12 ಕುಟುಂಬಗಳ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ತಕ್ಷಣವೇ ಜಮೀನು ಮಂಜೂರು ಮಾಡಬೇಕು ಹಾಗೂ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.Shivamogga | ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು; ಆರೋಪಿ ಬಂಧನ – ಅರಣ್ಯ ಇಲಾಖೆ ಪತ್ರಿಕಾ ಪ್ರಕಟಣೆ

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮರವೇರಿದ್ದ ರೈತ ನಾಗರಾಜ್ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲು ಹರಸಾಹಸಪಟ್ಟಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸ್ಥಳಕ್ಕೆ ಆಗಮಿಸಿ ರೈತನ ರಕ್ಷಣೆಗೆ ಮುಂದಾಗಿದ್ದಾರೆ.

ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆಲಕಾಲ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ನಂತರ ಮನವಲಿಸಿ ರೈತನನ್ನು ಮರದಿಂದ ಇಳಿಸಲಾಯಿತು.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement