Bhatkal | ಆಹಾರ, ನೀರಿಲ್ಲದೆ ತೆಂಗಿನ ಮರಕ್ಕೆ ಕಟ್ಟಿಹಾಕಿದ್ದ ಜಾನುವಾರುಗಳು; ಪೊಲೀಸರಿಂದ 7 ಜಾನುವಾರುಗಳ ರಕ್ಷಣೆ, ಒಂದು ಎತ್ತು ಸಾವು

bhatkal today news bhatkal today news

Bhatkal | ಆಹಾರ, ನೀರಿಲ್ಲದೆ ತೆಂಗಿನ ಮರಕ್ಕೆ ಕಟ್ಟಿಹಾಕಿದ್ದ ಜಾನುವಾರುಗಳು; ಪೊಲೀಸರಿಂದ 7 ಜಾನುವಾರುಗಳ ರಕ್ಷಣೆ, ಒಂದು ಎತ್ತು ಸಾವು.

ಭಟ್ಕಳ: ಜಾನುವಾರುಗಳಿಗೆ ಸೂಕ್ತ ಆರೈಕೆ ಮಾಡದೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸದೆ ತೆಂಗಿನ ಮರಗಳಿಗೆ ಕಟ್ಟಿಹಾಕಿದ್ದ ಅಮಾನವೀಯ ಘಟನೆ ಭಟ್ಕಳ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಟ್ಕಳ ಶಹರ ಪೊಲೀಸರು ದಾಳಿ ನಡೆಸಿ ಏಳು ಜಾನುವಾರುಗಳನ್ನು ರಕ್ಷಿಸಿದ್ದು, ಒಂದು ಎತ್ತು ಮೃತಪಟ್ಟಿರುವುದು ಪತ್ತೆಯಾಗಿದೆ.

ಪಟ್ಟಣದ ಮೈನುದ್ದೀನ್ ಸ್ಟ್ರೀಟ್ 2ನೇ ಕ್ರಾಸ್‌ನ ಬ್ಲಾಕ್ ಬಿ ಪ್ರದೇಶದಲ್ಲಿರುವ ಖಾಲಿ ಜಾಗದಲ್ಲಿ ಜಾನುವಾರುಗಳನ್ನು ಸರಿಯಾದ ಆರೈಕೆ ಇಲ್ಲದೆ ಕಟ್ಟಿಹಾಕಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.Bhatkal | ಮುಟ್ಟಳ್ಳಿ ಬೈಪಾಸ್‌ನಲ್ಲಿ ಭೀಕರ ಅಪಘಾತ; ಕಾರು–ಪಿಕಪ್ ಮುಖಾಮುಖಿ ಡಿಕ್ಕಿ, ಏಳು ಮಂದಿಗೆ ಗಾಯ

ಈ ವೇಳೆ ತೌಶಿಫ್ ಮಹಮ್ಮದ್ ಖಾಸಿಂ ಸಾಹೇಬ್ ಎಂಬುವವರ ಮನೆಯ ಸಮೀಪದ ಖಾಲಿ ಜಾಗದಲ್ಲಿ ಒಟ್ಟು ಎಂಟು ಜಾನುವಾರುಗಳನ್ನು ತೆಂಗಿನ ಮರಗಳಿಗೆ ಹಗ್ಗದಿಂದ ಕಟ್ಟಿಹಾಕಿರುವುದು ಕಂಡುಬಂದಿದೆ. ಜಾನುವಾರುಗಳಿಗೆ ಅಗತ್ಯವಾದ ಆಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ ಎನ್ನಲಾಗಿದೆ.Bhatkal |ಶಿರಾಲಿ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ವೈದ್ಯರ ಮೇಲೆ ಹಲ್ಲೆ, ಪ್ರತಿದೂರು 

Advertisement

ಪೊಲೀಸರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಒಂದು ಎತ್ತು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಉಳಿದ ಏಳು ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಿಸಿದ್ದಾರೆ. ವಶಪಡಿಸಿಕೊಂಡ ಜಾನುವಾರುಗಳ ಒಟ್ಟು ಅಂದಾಜು ಮೌಲ್ಯ ₹89 ಸಾವಿರ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಶಹರ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ತಿಮ್ಮಪ್ಪ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement