
Karwar |ಅರಣ್ಯದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟ- ₹63,480 ಮೌಲ್ಯದ 363 ಬಾಟಲಿ ಮದ್ಯ ಜಪ್ತಿ
ಕಾರವಾರ: ಕಾರವಾರ (karwar)ತಾಲೂಕಿನ ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಚಿತ್ತಾಕುಲ ಪೊಲೀಸರು ಬಂಧಿಸಿ, 63,480 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ನವೆಂಬರ್ 28ರಂದು ಬೆಳಿಗ್ಗೆ ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಸಮೀರ ತಂದೆ ಸಂಜಯ ಮಾಳೇಕರ, ಹೊಟೆಗಾಳಿ, ಕಾರವಾರ ತಾಲೂಕು ಎಂಬಾತ ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ಗೋವಾ ರಾಜ್ಯದಲ್ಲಿ ತಯಾರಾದ ವಿವಿಧ ಮಾದರಿಯ 363 ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಇದನ್ನೂ ಓದಿ:-Karwar | ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೀಕರ ಅಪಘಾತ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಸಾವು
ಆರೋಪಿತನು ಗೋವಾ ಗಡಿಯಿಂದ ಮೈಂಗಿಣಿ ಅರಣ್ಯ ಪ್ರದೇಶದ ಕಾಲುದಾರಿಯಲ್ಲಿ ಚೀಲಗಳನ್ನು ತಲೆಯ ಮೇಲೆ ಹೊತ್ತುಕೊಂಡು ಬಂದು, ಮದ್ಯದ ಬಾಟಲಿಗಳನ್ನು ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿ, ಬಳಿಕ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ. ದಾಳಿ ವೇಳೆ ಆತನ ಬಳಿಇದ್ದ ಒಟ್ಟು 63,480 ರೂ. ಮೌಲ್ಯದ 363 ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.Goa ದಲ್ಲಿ ಅಕ್ರಮ ಮದ್ಯ ತಯಾರಿಕೆಗೆ ಕರ್ನಾಟಕದಿಂದಲೇ ಸ್ಪಿರಿಟ್ ಪೂರೈಕೆ? ಹಾಲಿ ಸಚಿವರ ಹೆಸರು!
ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ.ಜಿ., ಪೊಲೀಸ್ ಉಪಾಧೀಕ್ಷಕ ಜಿ.ಎಸ್. ಲೋಕಾಪುರ ಹಾಗೂ ಕದ್ರಾ ವೃತ್ತದ ಸಿಪಿಐ ಪ್ರಭಾಕರ ಧರ್ಮಟ್ಟಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕ ಪರಶುರಾಮ ಮತ್ತು ಸಿಬ್ಬಂದಿಗಳಾದ ಎ.ಎಸ್.ಐ ಸಂತೋಷ ನಾಯ್ಕ, ಖಲಂದರ ಡಾಲಾಯತ್, ಗೌತಮ ರೊಡ್ಡನವರ ಹಾಗೂ ಅರ್ಜುನ ದೇಸಾಯಿ ಅವರ ತಂಡ ಕಾರ್ಯಾಚರಣೆ ನಡೆಸಿದೆ.





