ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

425

ಕಾರವಾರ :- ನದಿ ದಂಡೆಯ ಮೇಲೆ ಮೀನಿ ಹಿಡಿಯಲು ಗಾಳಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿ ದಡದಲ್ಲಿ ಭಾನುವಾರ ಸಂಜೆ ನಡೆದಿದೆ.ಮೋಹಿನ್ ಮೆಹಬೂಬ್ (15) ಮೊಸಳೆ ಪಾಲಾದ ಬಾಲಕನಾಗಿದ್ದು ಈತ ಮೀನು ಹಿಡಿಯಲು ದಾಂಡೇಲಿ-ಹಳಿಯಾಳ ರಸ್ತೆಯ ಕಾಳಿ ನದಿ ದಡದಲ್ಲಿ ಕುಳಿತಿದ್ದ.

ಈ ವೇಳೆ ಮೊಸಳೆ ದಾಳಿಮಾಡಿದ್ದು ಈತನನ್ನು ಹೊತ್ತೊಯ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು,ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಶೋಧ ಕಾರ್ಯ ನಡೆಸಿದರೂ ಆತನ ಪತ್ತೆಯಾಗಿಲ್ಲ. ಸೂಪಾ ಜಲಶಾಯದಿಂದ ಹರಿದುಬರುತ್ತಿರುವ ನೀರನ್ನು ಸಹ ಬಂದ್ ಮಾಡಲಾಗಿತ್ತು .ಆದರೇ ಈವರೆಗೂ ಬಾಲಕನ ಶವ ಸೋಮವಾರವೂ ಪತ್ತೆಯಾಗಿಲ್ಲ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!