BREAKING NEWS
Search

ಪಾಣಿ ದಾಖಲಿಗೆ ಲಂಚ ಕೇಳಿದ ಅಧಿಕಾರಿ-ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಭಿಕ್ಷೆ ಬೇಡಿ ಹಣತಂದು ತಕ್ಕ ಪಾಠ ಕಲಿಸಿದ ಯುವಕ!

1117

ಕಾರವಾರ: ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಬಯಸಿದ ಅಧಿಕಾರಿಯ ಮನಪರಿವರ್ತನೆ ಮಾಡುವುದಕ್ಕಾಗಿ ವ್ಯಕ್ತಿಯೊಬ್ಬರು ಜನರಿಂದ ಭಿಕ್ಷೆ ಬೇಡಿ ₹136 ಅನ್ನು ನೀಡಲು ಮುಂದಾದ ಘಟನೆ ಯಲ್ಲಾಪುರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಇಂದು ನಡೆದಿದೆ.

ತಟಗಾರ ಗ್ರಾಮದ ಸರ್ವೆ ನಂ 12ರಲ್ಲಿನ ಕ್ಷೇತ್ರವನ್ನು ಉಪ ನೋಂದಣಾಧಿಕಾರಿ ಕಚೇರಿ ಮೂಲಕ ಗಜಾನನ ಭಟ್ಟ ಹಾಗೂ ನಾರಾಯಣ ಭಟ್ಟ ಎಂಬ ಸಹೋದರರಿಬ್ಬರು ವಿಭಾಗ ಮಾಡಿಕೊಂಡಿದ್ದರು. ಇದನ್ನು ಪಹಣಿ ಪತ್ರಿಕೆಯಲ್ಲಿ ದಾಖಲು ಮಾಡಲು ಕಂದಾಯ ಇಲಾಖೆ ಅಧಿಕಾರಿಯೊಬ್ಬರು 2 ಸಾವಿರ ರೂ ಬೇಡಿಕೆ ಇಟ್ಟಿದ್ದರು.

ಹೀಗಾಗಿ ಗಜಾನನ ಭಟ್ಟ್ ಅವರ ಪುತ್ರ ಅಚ್ಯುತಕುಮಾರ ಎಂಬಾತನು ಮಂಗಳವಾರ ಸಾರ್ವಜನಿಕರಿಂದ ಭಿಕ್ಷೆ ಬೇಡಿ ಅಧಿಕಾರಿಗೆ ಅವರು ಬಯಸಿದ ಹಣ ನೀಡಲು ಮುಂದಾದರು.

ಭ್ರಷ್ಟಾಚಾರದ ಕುರಿತು ಹೋರಾಟ ಮಾಡುವುದಕ್ಕಿಂತ ಮೊದಲು ಅಧಿಕಾರಿಗಳ ಮನ ಪರಿವರ್ತನೆ ಮಾಡುವುದು ಮುಖ್ಯ ಎಂದು ಭಾವಿಸಿ ಜನರಿಂದ ಭಿಕ್ಷೆ ಬೇಡಿ ಅಧಿಕಾರಿಯ ಬೇಡಿಕೆ ಪೂರೈಸಲು ನಿರ್ಧರಿಸಿದೆ ಎಂದು ಅಚ್ಯುತಕುಮಾರ ಈ ವೇಳೆ ತಿಳಿಸಿದರು. ಅಚ್ಯುತಕುಮಾರ ಅವರು ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ ಟಿವಿ ಕಡ್ಡಾಯ ಮಾಡಬೇಕು ಎಂದು ಮೂರು ವರ್ಷದ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು.

ಜಿಲ್ಲಾಡಳಿತ ಆ ವೇಳೆ ಸರ್ಕಾರಿ ಕಚೇರಿಗಳಲ್ಲಿ ಸಿಸಿ ಟಿವಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಎಲ್ಲಾ ಕಚೇರಿಗಳಲ್ಲಿ ಆ ಆದೇಶ ಇನ್ನೂ ಅನುಷ್ಠಾನ ಆಗಿಲ್ಲ. ಈ ಆದೇಶದ ಅನ್ವಯ ಯಲ್ಲಾಪುರದ ತಹಶೀಲ್ದಾರ್ ಕಚೇರಿಯ ಎಲ್ಲಡೆ ಸಿ.ಸಿ ಟಿವಿ ಅಳವಡಿಸುವಂತೆ ಅವರು ತಹಶೀಲ್ದಾರ್ ಶ್ರೀಕೃಷ್ಣ ಕಾಮೇಕರ್ ಅವರಿಗೆ ಮನವಿ ಮಾಡಿದ್ದಾರೆ.
ಇದಲ್ಲದೇ ಭ್ರಷ್ಟಾಚಾರಮಾಡುವ ಅಧಿಕಾರಿಗಳಿಗೆ ಈ ಯುವಕ ಭಿಕ್ಷೆಯ ಅಸ್ತ್ರ ಬಳಸಿ ತಿದ್ದುವ ಕೆಲಸ ಮಾಡಿದ್ದು ಭ್ರಷ್ಟ ಅಧಿಕಾರಿಗಳಿಗೆ ಪಾಠವಾಗಿದೆ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!