Ankola:ಅವರ್ಸಾ ಬಳಿ ಖಾಸಗಿ ಬಸ್ ಪಲ್ಟಿ ತಪ್ಪಿದ ದುರಂತ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಕವಲಗದ್ದ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬೆಂಗಳೂರುದಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿದ ವೇಳೆ ಅಲ್ಲೇ ಇದ್ದ ಮರಕ್ಕೆ ಅಡ್ಡವಾಗಿ ಸಿಲುಕಿ ನಿಂತಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ:-Ankola| ಅಂಕೋಲದಲ್ಲಿ ನಾಡಬಾಂಬ್ ತೆಗೆದುಕೊಂಡು ಹೋದ ಮೃತ ನಾಗೇಂದ್ರ|ರಮ್ಯಾಳಿಂದ ಲವ್ ಸ್ಟೋರಿ ರಿವೀಲ್
ಅಪಘಾತದ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದು ಹಾಗೂ ಮರ ತಡೆಯಾಗಿ ನಿಂತಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:-Ankola| ಅಂಕೋಲದಲ್ಲಿ ನಾಡಬಾಂಬ್ ತೆಗೆದುಕೊಂಡು ಹೋದ ಮೃತ ನಾಗೇಂದ್ರ|ರಮ್ಯಾಳಿಂದ ಲವ್ ಸ್ಟೋರಿ ರಿವೀಲ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
