Ankola |ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಸಿಬರ್ಡ್ ಸಿಬ್ಬಂದಿ ಗಂಭೀರ

Ankola |ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಸಿಬರ್ಡ್ ಸಿಬ್ಬಂದಿ ಗಂಭೀರ Ankola |ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಸಿಬರ್ಡ್ ಸಿಬ್ಬಂದಿ ಗಂಭೀರ
Ankola |ಕಾರು-ಬೈಕ್ ಮುಖಾಮುಖಿ ಢಿಕ್ಕಿ; ಸಿಬರ್ಡ್ ಸಿಬ್ಬಂದಿ ಗಂಭೀರ
Ad karwar auto
ಕಾರವಾರ

​ಅಂಕೋಲಾ (ankola)ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಟೋಲ್ ಪ್ಲಾಜಾ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

​ಸಿಬರ್ಡ್ ನೌಕಾ ನೆಲೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲಗೇರಿ ನಿವಾಸಿ ರಾಮ ಚಂದ್ರಕಾಂತ ನಾಯ್ಕ (40) ಗಂಭೀರ ಗಾಯಗೊಂಡ ಬೈಕ್ ಸವಾರ.

ನಾಳೆ ತಮ್ಮ ಮಗಳ ಐದನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಾಮ ನಾಯ್ಕ ಬೇಗ ಮನೆಗೆ ತಲುಪುವ ಧಾವಂತದಲ್ಲಿದ್ದರು. ಮನೆಗೆ ಹತ್ತಿರವಾಗುತ್ತದೆ ಎಂಬ ಕಾರಣಕ್ಕೆ ಬೈಕ್‌ನಲ್ಲಿ ರಾಂಗ್ ರೂಟ್ (ವಿರುದ್ಧ ದಿಕ್ಕು)ನಲ್ಲಿ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಗೋವಾ ನೋಂದಣಿಯ ಬೆಂಜ್ ಕಾರು (GA 03 AF 5458) ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

Advertisement

​ಅಪಘಾತದ ಭರಕ್ಕೆ ಬೈಕ್ ಸವಾರ ರಾಮ ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
​ವಿಷಯ ತಿಳಿಯುತ್ತಿದ್ದಂತೆ ಅಂಕೋಲಾ ಸಿಪಿಐ ಚಂದ್ರಶೇಖರ್ ಮಠಪತಿ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement