Ankola| ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಹತ್ಯೆಗೆ ಯತ್ನ 

Ankola:ಅಂಕೋಲದ ಕೇಣಿ ಬಳಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನ ಮಾಡಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ
Ankola police case Ankola police case
Ankola police case

Ankola| ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಹತ್ಯೆಗೆ ಯತ್ನ 

 

Ankola/ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ(ankola) ತಾಲೂಕಿನ ಕೇಣಿ ರಸ್ತೆಯ ಅಂಕೋಲದ ಮಾರ್ಕೆಟ್ ರಸ್ತೆ ಬಳಿ  ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನ ನಡೆಸಿದ್ದಾರೆ.

Advertisement

ಈ ಹಿಂದೆ ರಾಜ್ಯ ಕೆಪಿಸಿಸಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಗೋಪಾಲಕೃಷ್ಣ ನಾಯ್ಕ ಅವರು ಕ್ಷೌರ ಮಾಡಿಸಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಅಂಕೋಲ ಮಾರ್ಕೇಟ್ ರಸ್ತೆ ಬಳಿ ಆಗುಂತಕರು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ.

ಗೋವಾ ನೋಂದಣಿಯ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ರಾಡ್‌ನಿಂದ ಹೊಡೆದು ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Gopalkrisha naik

Ankola|ದೇಶದ ಗಡಿಕಾಯುತ್ತಿವೆ ಅಂಕೋಲದ 40 ಶ್ವಾನಗಳು|ಇದು ಸರ್ಕಾರಿಅಧಿಕಾರಿಯ ಯಶೋಗಾಥೆ

ಈ ದಾಳಿಯಲ್ಲಿ ಗೋಪಾಲಕೃಷ್ಣ ನಾಯ್ಕ ಅವರ ತಲೆಗೆ ಹಾಗೂ ಗುತ್ತಿಗೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಅಂಕೋಲದ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement