Ankola| ಕಾರವಾರ-ಅಂಕೋಲ ಸರ್ಕಾರಿ ಬಸ್ ನಲ್ಲಿ ಲೈಂಗಿಕ ದೌರ್ಜನ್ |ಪ್ರಕರಣ ದಾಖಲು.
Karwar news 31 December 2025:- ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಯುವತಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿ ನಿದ್ದೆ ಮಾಡುತ್ತಿದ್ದಾಗ, ಪಕ್ಕದಲ್ಲಿ ಕುಳಿತಿದ್ದ ಯುವಕ ಆಕೆಯ ಎದೆ ಮೇಲೆ ಕೈ ಇಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ನಿದ್ದೆಯಿಂದ ಎಚ್ಚರಗೊಂಡ ಯುವತಿ ನೋಡುತ್ತಿದ್ದಂತೆ ಆರೋಪಿಯ ಕೈ ತನ್ನ ಎದೆ ಮೇಲಿದ್ದುದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.
ಕೂಡಲೇ ಧೈರ್ಯ ಪ್ರದರ್ಶಿಸಿದ ಯುವತಿ, ಯುವಕನ ವಿಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಯುವತಿ ಆರೋಪಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಯುವಕನಿಗೆ ಉಗಿದು, ಸಾರ್ವಜನಿಕವಾಗಿ ವಿಡಿಯೋ ವೈರಲ್ ಮಾಡಿದ್ದು, ಎಸ್.ಪಿ ಗೆ ಟ್ಯಾಗ್ ಮಾಡಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದಾರೆ.
Ankola | ದೇವಿ ಸನ್ನಿದಿಯಲ್ಲಿ ಜೋಡೆತ್ತಿನ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್ ! ಏನಂದ್ರು ಗೊತ್ತಾ?
ನಮ್ಮ ರಕ್ಷಣೆಗೆ ನಾವೇ ಮುಂದೆ ಬರಬೇಕು ಎಂಬ ಸಂದೇಶವನ್ನು ಈ ವಿಡಿಯೋ ಮೂಲಕ ಎಲ್ಲಾ ಮಹಿಳೆಯರಿಗೆ ಯುವತಿ ನೀಡಿದ್ದಾಳೆ.
ಈ ಘಟನೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಭಾರಿ ವೈರಲ್ ಆಗುತ್ತಿರುವ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎಸ್‌ಪಿ ದೀಪನ್ ಎಂ.ಎನ್ ಅವರು,ಯುವತಿ ಠಾಣೆಗೆ ಬಂದು ದೂರು ನೀಡಿದಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸದ್ಯ ಯುವತಿ ಹಾಗೂ ಆರೋಪಿತ ಯುವಕನ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಘಟನೆಯು ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಆರೋಪಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.







