ಕಸಾಯಿ ಖಾನೆಗೆ ಕೊಂಡೊಯ್ಯುತಿದ್ದ ಕೋಣ ವಶ-₹9ಲಕ್ಷ ಸೊತ್ತುಗಳು ವಶ.

1390

ಕಾರವಾರ :- ಅಕ್ರಮವಾಗಿ ಕೋಣಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ತಾಲ್ಲೂಕಿನ ಕೋಡ್ಸಣಿ ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ, ಹಿಂಸಾತ್ಮಕ ರೀತಿಯಲ್ಲಿ ಕೋಣಗಳನ್ನ ತುಂಬಿಕೊಂಡು ಮಂಗಳೂರಿನ ಕಡೆ ಸಾಗಿಸಲಾಗುತ್ತಿತ್ತು.

ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 2.25 ಲಕ್ಷ ಮೌಲ್ಯದ 17 ಕೋಣಗಳನ್ನ ರಕ್ಷಣೆ ಮಾಡಲಾಗಿದೆ. ಈ ವೇಳೆ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದ್ದ ಆರೋಪಿಗಳಾದ ದಕ್ಷಿಣಕನ್ನಡದ ಬೆಳ್ತಂಗಡಿಯ ಹೈದರ್ ಬ್ಯಾರಿ, ಅಂಕೋಲಾದ ಬೊಮ್ಮಯ್ಯ ನಾಯಕ, ಹಾಸನದ ಮಂಜೇಗೌಡ ಹಾಗೂ ಕೇರಳದ ಕಾಸರಗೋಡು ಮೂಲದ ಅಬ್ದುಲ್ ರಿಯಾಸ್ ಎನ್ನುವವರನ್ನ ಬಂಧಿಸಲಾಗಿದೆ.

ಇನ್ನೋರ್ವ ಆರೋಪಿ ಕೇರಳ ಮೂಲದ ಅಬುಬಕ್ಕರ್ ದಿಲ್‌ಶಾದ್ ಎನ್ನುವವನು ಪರಾರಿಯಾಗಿದ್ದಾನೆ. ಇನ್ನು ಜಾನುವಾರು ಸಾಗಾಟಕ್ಕೆ ಬಳಸಿದ್ದ ಲಾರಿ ಹಾಗೂ ಕಾರು ಸೇರಿ ಸುಮಾರು 9 ಲಕ್ಷ ಮೌಲ್ಯದ ಸ್ವತ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದು ಈ ಸಂಬಂಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!