ರಾಮಮಂದಿರ ಉದ್ಘಾಟನೆ| ತಮಿಳುನಾಡಿನಲ್ಲಿ ಲೈವ್ ನಿರ್ಬಂಧ- ಕರ್ನಾಟಕದಲ್ಲಿ ರಜೆ ಇಲ್ಲ! ಮೆರವಣಿಗೆಗೆ ಕತ್ತರಿ.?

115

ಕಾರವಾರ ,ಜನವರಿ21:- ತಮಿಳುನಾಡು ಸರ್ಕಾರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಆರೋಪಿಸಿದ್ದಾರೆ. ಈ ಕುರಿತು ಟ್ಟೀಟ್‌ ಮಾಡಿರುವ ಅವರು, ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಕೇಂದ್ರ ವಿತ್ತ ಸಚಿವೆ, ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ- ಸಿಎಂ

ಕೇಂದ್ರ ಸರ್ಕಾರ ರಾಮಮಂದಿರ ಉದ್ಘಾಟನೆ ವೇಳೆ ಕೇಂದ್ರ ನೌಕರರಿಗೆ ಅರ್ಧ ದಿನ ರಜೆ ನೀಡಲಾಗಿದೆ.ಇದರ ಜೊತೆ ಹಲವು ರಾಜ್ಯದಲ್ಲಿ ಸಹ ರಜೆ ಘೋಷಣೆ ಜೊತೆ ಮದ್ಯ ,ಮಾಂಸ ಮಾರಾಟಕ್ಕೂ ನಿಷೇಧ ಹೇರಿದೆ.

ಆದ್ರೆ ಕರ್ನಾಟಕದಲ್ಲಿ ಮಾತ್ರ ಯಾವುದೇ ರಜೆ ಇಲ್ಲ ಎಂದು ಕುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುಮಕೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಆದ್ರ ಮುಜರಾಯಿ ಇಲಾಖೆಯಿಂದ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ‌. ಬೆಂಗಳೂರಿನ ಮಹಾದೇವ ಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ರಾಮ ದೇವಸ್ಥಾನ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಏನು?


ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಮನ ಪ್ರಾಣ ಪ್ರತಿಷ್ಟೆ ದಿನ ಐತಿಹಾಸಿಕ ಹಿನ್ನೆಲೆ ಇರುವ ಗೋಕರ್ಣದ ರಾಮತೀರ್ಥ, ಮಹಾಬಲೇಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಗಂಗಾರತಿ ಇರಲಿದೆ.ಇನ್ನು ಭಟ್ಕಳದಲ್ಲಿ ಇಡೀ ನಗರವೇ ಸಂಬ್ರಮದಲ್ಲಿ ತಲ್ಲೀನವಾಗಿದ್ದು ಇಡೀ ನಗರ ಕೇಸರಿಮಯವಾಗಿದೆ. ಇನ್ನು ಭಟ್ಕಳದ ಹಲವು ದೇವಸ್ಥಾನಗಳಲ್ಲಿ ಅನ್ನಸಂತರ್ಪಣೆ ,ವಿಶೇಷ ಪೂಜೆ ,ದೀಪೋತ್ಸವ ಕಾರ್ಯಕ್ರಮ ವಿದೆ.

ಜಿಲ್ಲೆಯಲ್ಲಿ ಮೆರವಣಿಗೆ ನಿರ್ಬಂಧ?
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆರವಣಿಗೆ ಮುಂತಾದ ಕಾರ್ಯಕ್ರಮ ನೆರವೇರಿಸಲು ಪೊಲೀಸ್ ಇಲಾಖೆಯ ಅನುಮತಿ ಬೇಕಿದೆ.ಇನ್ನು ಭಟ್ಕಳದಲ್ಲಿ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದವಸ್ತ್ ಕೈಗೊಳ್ಳಲಾಗಿದೆ.

ಮೆರವಣಿಗೆಗೆ ಅನುಮತಿ ನಿರಾಕರಣೆ!

ಭಟ್ಕಳದಲ್ಲಿ ಮೆರವಣಿಗೆ ನಡೆಸಲು ಅನುಮತಿ ನಿರಾಕರಣೆ ಮಾಡಲಾಗುತ್ತಿದೆ ಎಂಬ ಮಾತು ಕೇಳಿಬರುತಿದ್ದು ಮೌಕಿಕವಾಗಿ ಪೊಲೀಸರು ಮೆರವಣಿಗೆ ನೆಡಸದಂತೆ ಸಂಘಟಕರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೇ ಇದರ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ .ಎನ್ ರವರನ್ನು ಮುಂಜಾನೆಯಿಂದ ಸಂಪರ್ಕಿಸಿದರೂ ಪ್ರತಿಕ್ರಿಯೆ ಮಾತ್ರ ನೀಡದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!