BREAKING NEWS
Search

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಪ್ರಮುಖ ಕಾಂಗ್ರೆಸ್ ಮುಖಂಡರ ಬಂಧನ!

1033

ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಿಂದ ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್, ಆರ್.ವಿ ದೇಶಪಾಂಡೆ, ಸಚಿನ್ ಮೆಗಾ, ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು.

ಮೆಜೆಸ್ಟಿಕ್ ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.

ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವಲಿಸುವಲ್ಲಿ ವಿಫಲರಾಗಿದ್ದರು.

ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಯಿತು.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮೂವತ್ತು ಜಿಲ್ಲೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಕಿಸಾನ್ ಸಂಘದ ಸದಸ್ಯರು ಭಾಗವಹಿಸಿದ್ದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!