Belagavi | ಕೂಲಿ ಕಾರ್ಮಿಕರಿಗೆ ಸಿಕ್ಕ ಗಂಗರ ಕಾಲದ ಪುರಾತನ ಚಿನ್ನದ ನಾಣ್ಯಗಳ ನಿಧಿ

Belagavi | ಕೂಲಿ ಕಾರ್ಮಿಕರಿಗೆ ಸಿಕ್ಕ ಗಂಗರ ಕಾಲದ ಪುರಾತನ ಚಿನ್ನದ ನಾಣ್ಯಗಳ ನಿಧಿ Belagavi | ಕೂಲಿ ಕಾರ್ಮಿಕರಿಗೆ ಸಿಕ್ಕ ಗಂಗರ ಕಾಲದ ಪುರಾತನ ಚಿನ್ನದ ನಾಣ್ಯಗಳ ನಿಧಿ
ಬೆಳಗಾವಿಯಲ್ಲಿ ಸಿಕ್ಕ ಗಂಗರ ಕಾಲದ ನಾಣ್ಯಗಳು
Belagavi | ಕೂಲಿ ಕಾರ್ಮಿಕರಿಗೆ ಸಿಕ್ಕ ಗಂಗರ ಕಾಲದ ಪುರಾತನ ಚಿನ್ನದ ನಾಣ್ಯಗಳ ನಿಧಿ
ಬೆಳಗಾವಿಯಲ್ಲಿ ಸಿಕ್ಕ ಗಂಗರ ಕಾಲದ ನಾಣ್ಯಗಳು

ಬೆಳಗಾವಿ: ಬೆಳಗಾವಿ (belagavi)ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಪುರಾತನ ಕಾಲದ ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕಾಮಗಾರಿ ನಡೆಸುತ್ತಿದ್ದ ವೇಳೆ ಗಡಿಗೆಯೊಂದರಲ್ಲಿ 14 ಚಿನ್ನದ ನಾಣ್ಯಗಳು ಪತ್ತೆಯಾಗಿವೆ.

ಪತ್ತೆಯಾದ ನಾಣ್ಯಗಳ ಒಟ್ಟು ತೂಕ 54.8 ಗ್ರಾಂ ಆಗಿದ್ದು, ಅವುಗಳ ಅಂದಾಜು ಮೌಲ್ಯ ₹8.27 ಲಕ್ಷ ಎಂದು ತಿಳಿದುಬಂದಿದೆ.

ಇದನ್ನೂ ಓದಿ:- Belagavi| ಕೆಲಸಕ್ಕೆಂದು ವಿದೇಶಕ್ಕೆ ಹೋದವರು ಒತ್ತೆಯಾಳಾದ್ರು|ಸೈಬರ್ ವಂಚಕರಿಂದ ಪಾರುಮಾಡಿದ ಪೊಲೀಸರು!

Advertisement

ಕೂಲಿಕಾರ್ಮಿಕರು ತಮಗೆ ದೊರೆತ ಚಿನ್ನದ ನಾಣ್ಯಗಳನ್ನು ತಮ್ಮ ಬಳಿ ಇಟ್ಟುಕೊಳ್ಳದೆ ಅಧಿಕಾರಿಗಳಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿಯ ಸಮ್ಮುಖದಲ್ಲಿ ನಾಣ್ಯಗಳನ್ನು ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಅವರಿಗೆ ಹಸ್ತಾಂತರಿಸಲಾಯಿತು.

ಬಳಿಕ ತಹಶೀಲ್ದಾರ್ ಅವರು ಈ ಎಲ್ಲ ನಾಣ್ಯಗಳನ್ನು ಸರ್ಕಾರದ ಖಜಾಂಚಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ಪತ್ತೆಯಾದ 14 ನಾಣ್ಯಗಳ ಮೇಲೆ ಆನೆಯ ಚಿತ್ರ ಇರುವುದಾಗಿ ಹೇಳಲಾಗುತ್ತಿದೆ. ಇತಿಹಾಸದ ಪ್ರಕಾರ ತಲಕಾಡಿನ ಗಂಗರ ರಾಜಲಾಂಛನವಾಗಿ ಆನೆಯನ್ನು ಬಳಸಲಾಗುತ್ತಿತ್ತು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ನಾಣ್ಯಗಳು ಗಂಗರ ಕಾಲಕ್ಕೆ ಸಂಬಂಧಿಸಿರಬಹುದೆಂಬ ಮಾಹಿತಿ ಕೇಳಿಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಈ ನಾಣ್ಯಗಳು ಕ್ರಿ.ಶ. 10ರಿಂದ 15ನೇ ಶತಮಾನದ ಅವಧಿಗೆ ಸೇರಿರಬಹುದೆಂದು ಅಂದಾಜಿಸಲಾಗಿದೆ. ಆದರೆ ನಾಣ್ಯಗಳ ನಿಖರ ಕಾಲಘಟ್ಟ ಹಾಗೂ ಐತಿಹಾಸಿಕ ಹಿನ್ನೆಲೆಯ ಬಗ್ಗೆ ತಜ್ಞರಿಂದ ಪರಿಶೀಲನೆ ನಡೆದ ಬಳಿಕವೇ ಸ್ಪಷ್ಟ ಮಾಹಿತಿ ದೊರೆಯಲಿದೆ.

ಅಮೂಲ್ಯವಾದ ಚಿನ್ನದ ನಾಣ್ಯಗಳು ಸಿಕ್ಕಿದ್ದರೂ ಅವುಗಳನ್ನು ಅಧಿಕಾರಿಗಳಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರ ನಡೆಗೆ ತಾಲೂಕು ಆಡಳಿತ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾರ್ಮಿಕರನ್ನು ಪ್ರಶಂಸಿಸಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement