Bengaluru Airport: ಟರ್ಮಿನಲ್ 2 ಅಂತರಾಷ್ಟ್ರೀಯ ಕಾರ್ಯಾಚರಣೆ ಮುಂದೂಡಿಕೆ.

34

ಬೆಂಗಳೂರು :- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ನಾಳೆ ಸಿಂಗಾಪುರದಿಂದ ಮೊದಲ ಅಂತರಾಷ್ಟ್ರೀಯ ವಿಮಾನ ಇಳಿಯಬೇಕಿತ್ತು.ಆದರೇ ಈ ಕುರಿತು ಬಿ.ಐ.ಎ.ಎಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು

ವಿವಿಧ ನಿಯಂತ್ರಕ ಇಲಾಖೆಗಳೊಂದಿಗೆ ಚರ್ಚಿಸಿ ಈ ಕಾರ್ಯಾಚರಣೆಯ  ಮುಂದಿನ ದಿನಾಂಕವನ್ನು ನಾಳೆ ಪ್ರಕಟಿಸುತ್ತೇವೆ. ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ, ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ  ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಆದ್ದರಿಂದ, ಮುಂದಿನ ಸೂಚನೆ ಪ್ರಕಟಣೆಯಾಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ಹೇಳಿದೆ.

ಯಾವುದೇ ರೀತಿಯ ಅನಾನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ, ನಿಮ್ಮ ತಾಳ್ಮೆ ಮತ್ತು ಸಹಕಾರದೊಂದಿಗೆ ಉತ್ತಮ ಪ್ರಯಾಣದ ಅನುಭವವನ್ನು ಕಲ್ಪಿಸಲು ಕಾರ್ಯೋನ್ಮತರಾಗಿದ್ದೇವೆ. ಹೆಚ್ಚಿನ ವಿವರಗಳಿಗಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರು ತಾವು ಪ್ರಯಾಣ ಮಾಡಲಿರುವ  ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ ಎಂದು ಬಿ.ಐ.ಎ.ಎಲ್ ವಕ್ತಾರರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!