Bhatkal| ಡ್ರಂಕ್ ಅಂಡ್ ಡ್ರೈವ್ ಪ್ರಕರಣ: ಭಟ್ಕಳ ಗ್ರಾಮೀಣ ಠಾಣೆ ಸಿಪಿಐ ,ಹೆಚ್.ಪಿ.ಸಿ ಅಮಾನತು.

Bhatkal news :-ಡ್ರಂಕ್ ಅಂಡ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ (bhatkal)ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿಯನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಆತನಿಗೆ ಸಾತ್ ನೀಡಿ ಬ್ರಷ್ಟಾಚಾರದಲ್ಲಿ ಭಾಗಿಯಾದ ಭಟ್ಕಳ ಮಂಕಿ ಮೂಲದ ಹೆಡ್ ಕಾನಸ್ಟೇಬಲ್ ಅಶೋಕ್ ನಾಯ್ಕ ಕೂಡ ಅಮಾನತ್ತಾಗಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ಸಿಪಿಐ ಮಂಜುನಾಥ್ ವಿರುದ್ಧ ಡ್ರಂಕ್ ಡ್ರೈವ್ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಾರ್ವಜನಿಕರಿಂದ 15 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿತ್ತು.
ಇನ್ನು ಹಣವನ್ನು ಕೋರ್ಟ್‌ಗೆ ಪಾವತಿಸದೆ ನಿರ್ಲಕ್ಷ ಮಾಡಲಾಗಿದ್ದು ಈ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಡ್ರಂಕ್ ಆಂಡ್ ಡ್ರೈವ್ ಸಂಬಂಧ ಜುಲೈ ತಿಂಗಳಲ್ಲಿ ಸಿಪಿಐ ವಿರುದ್ಧ ಅಧಿಕೃತ ದೂರು ದಾಖಲಾಗಿತ್ತು.
ದೂರು ಆಧರಿಸಿ ತನಿಖೆಗೆ ಸೂಚನೆ ನೀಡಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಸಿಪಿಐ ಮಂಜುನಾಥ್ ತಪ್ಪು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ತನಿಖೆಯಲ್ಲಿ ಸಿಪಿಐ ಲೋಪ ಕಂಡುಬಂದ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ.
Bhatkal| ಮಂಕಿ ಪಟ್ಟಣ ಪಂಚಾಯ್ತಿ ಚುನಾವಣೆ:ಸಚಿವ ಮಂಕಾಳು ವೈದ್ಯ ಬೆಂಬಲಿಗರಿಗೆ ಹಿನ್ನಡೆ|ಬಿಜೆಪಿ ಗೆ ಜಯ
ಇದೇ ಪ್ರಕರಣದಲ್ಲಿ ಸಿಪಿಐಗೆ ಸಾಥ್ ನೀಡಿದ್ದ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯನ್ನೂ ಅಮಾನತು ಮಾಡಲಾಗಿದೆ. ಅಲ್ಲದೇ, ದೂರು ನೀಡಬೇಡಿ ಎಂದು ದೂರುದಾರರನ್ನು ಗದರಿಸಿದ್ದ ಆರೋಪದ ಮೇರೆಗೆ ಭಟ್ಕಳ ಗ್ರಾಮೀಣ ಠಾಣೆಯ ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನೂ ಅಮಾನತು ಮಾಡಲಾಗಿದೆ.
Bhatkal| ಸಮುದ್ರದಲ್ಲಿ ಮುಳಗಿ ಇಬ್ಬರು ಸಾವು
ಡ್ರಂಕ್ ಡ್ರೈವ್ ಪ್ರಕರಣದಲ್ಲಿ ಬೆದರಿಸಿ ಸಾರ್ವಜನಿಕರಿಂದ ಹಣ ಪಡೆದಿದ್ದಲ್ಲದೇ ಕೋರ್ಟ್‌ಗೆ ದಂಡ ಪಾವತಿಸದೇ ಇರುವುದು ಗಂಭೀರ ಶಿಸ್ತುಲೋಪ ಎಂದು ಪರಿಗಣಿಸಿ ಸಿಪಿಐ ಹಾಗೂ ಹೆಡ್ ಕಾನ್ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಪೊಲೀಸ್ ಇಲಾಖೆಯೊಳಗೆ ಭಾರೀ ಚರ್ಚೆಗೆ ಕಾರಣವಾಗಿದೆ.
