


ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (bhatkal)ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಗಳಿಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿದ್ದ ಜೀವನ್ ನಾಯ್ಕ ಹಾಗೂ ದೇವರಾಜ್ ನಾಯ್ಕ ಅವರಿಗೆ ಭಟ್ಕಳದ ಮಾನ್ಯ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಜೀವನ್ ನಾಯ್ಕ ಹಾಗೂ ದೇವರಾಜ್ ನಾಯ್ಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದ ಬಳಿಕ ಇಬ್ಬರಿಗೂ ಜಾಮೀನು ಮಂಜೂರಾಗಿದೆ. ಇದನ್ನೂ ಓದಿ:-Bhatkal | ಮಸೀದಿ,ಮದರಸಾಗೆ ಕಲ್ಲುತೂರಾಟ ಘಟನೆಗೆ ಬಿಗ್ ಟ್ವಿಸ್ಟ್ ! ಮತ್ತೊಂದು ದೂರು ದಾಖಲು
ಈ ನಡುವೆ ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.ಇದನ್ನೂ ಓದಿ:-Bhatkal | ಸಾರ್ವಜನಿಕ ಗಣಪತಿ ವಿಸರ್ಜನೆ ವೇಳೆ ಮಸೀದಿ,ಮದರಸಾ ಗಳಿಗೆ ಕಲ್ಲು ತೂರಾಟ !
ಘಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭಟ್ಕಳದಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.

