Bhatkal | ಮಸೀದಿ,ಮದರಸಾಗೆ ಕಲ್ಲುತೂರಾಟ ಘಟನೆಗೆ ಬಿಗ್ ಟ್ವಿಸ್ಟ್ ! ಮತ್ತೊಂದು ದೂರು ದಾಖಲು

AddText 09 17 07.55.29 AddText 09 17 07.55.29

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

ಕಾರವಾರ /ಭಟ್ಕಳ:ಭಟ್ಕಳದಲ್ಲಿ(bhatkal) ಮಸೀದಿ ಹಾಗೂ ಮದರಸಾಗೆ ಕಲ್ಲು ಎಸೆದ ಪ್ರಕರಣಕ್ಕೆ ಬಿಗ್ ಟ್ವಿಷ್ಟ್ ಸಿಕ್ಕಿದ್ದು ಇದೀಗ ಮತ್ತೊಂದು ದೂರು ದಾಖಲಾಗಿದೆ.

ಏನದು ಘಟನೆ?

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಣೇಶ ಮೂರ್ತಿಯತ್ತ ಕಲ್ಲು ತೂರಾಟ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮತ್ತೊಂದು ದೂರು
ಮಸೀದಿ ಬಳಿ ಭದ್ರತೆ

 ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗಣೇಶ ಮೂರ್ತಿಯತ್ತ ಕಲ್ಲು ತೂರಾಟ ನಡೆಸಿ ಪ್ರಕ್ಷುಬ್ಧ ವಾತಾವರಣ ನಿರ್ಮಿಸಿದ ಆರೋಪದ ಕುರಿತು ಸಾರ್ವಜನಿಕ ಗಣೇಶೋತ್ಸವ ಸಮಿತಿ ತಲಾಂದ ಅಧ್ಯಕ್ಷರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ಸಾರ್ವಜನಿಕ ಗಣೇಶೋತ್ಸವ ಸಮಿತಿ ತಲಾಂದ ಅಧ್ಯಕ್ಷ ರಾಜು ತಂದೆ ಸಂಕಪ್ಪ ನಾಯ್ಕ (47) ಅವರು

ದೂರಿನ ಪ್ರಕಾರ, ಬುಧವಾರ ರಾತ್ರಿ 8.20ರ ಸುಮಾರಿಗೆ ತಲಾಂದ ಗಣೇಶೋತ್ಸವ ಮಠಪದಿಂದ ಗಣೇಶ ವಿಗ್ರಹವನ್ನು ವಿಸರ್ಜನಾ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಮೆರವಣಿಗೆಯು ಗುಳ್ಳೆ ರೈಲ್ವೆ ಹಳಿ ಮೇಲಿನ ಬ್ರಿಡ್ಜ್ ದಾಟಿ ಮದರಸಾ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ, ರಾತ್ರಿ ಸುಮಾರು 9.30ರ ವೇಳೆಗೆ ರಾಮಚಂದ್ರ ನಾಯ್ಕ ಅವರಿಗೆ ಸೇರಿದ ಕಟ್ಟಡದ ಮೇಲಿನಿಂದ ಹೆಸರು-ವಿಳಾಸ ತಿಳಿದುಬಾರದ ಕಿಡಿಗೇಡಿಗಳು ಗಣೇಶ ಮೂರ್ತಿಯತ್ತ ಕಲ್ಲುಗಳನ್ನು ತೂರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಕಲ್ಲು ತೂರಾಟದಿಂದ ಮೆರವಣಿಗೆಯಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:-Bhatkal | ಸಾರ್ವಜನಿಕ ಗಣಪತಿ ವಿಸರ್ಜನೆ ವೇಳೆ ಮಸೀದಿ,ಮದರಸಾ ಗಳಿಗೆ ಕಲ್ಲು ತೂರಾಟ !

ಘಟನೆಗೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ ಆರೋಪಿತರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜು ನಾಯ್ಕ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement