Bhatkal | ಸಾರ್ವಜನಿಕ ಗಣಪತಿ ವಿಸರ್ಜನೆ ವೇಳೆ ಮಸೀದಿ,ಮದರಸಾ ಗಳಿಗೆ ಕಲ್ಲು ತೂರಾಟ !

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳಿಗೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳಿಗೆ ಕಲ್ಲು ತೂರಾಟ ನಡೆದಿರುವ ಘಟನೆ
ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳಿಗೆ ಕಲ್ಲು ತೂರಾಟ ನಡೆದಿರುವ ಘಟನೆ

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

Bhatkal | ಸಾರ್ವಜನಿಕ ಗಣಪತಿ ವಿಸರ್ಜನೆ ವೇಳೆ ಮಸೀದಿ,ಮದರಸಾ ಗಳಿಗೆ ಕಲ್ಲು ತೂರಾಟ !

ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳಿಗೆ ಕಲ್ಲು ತೂರಾಟ ನಡೆದಿರುವ ಘಟನೆ
ಭಟ್ಕಳದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾಗಳಿಗೆ ಕಲ್ಲು ತೂರಾಟ ನಡೆದಿರುವ ಘಟನೆ

AddText 09 17 07.55.29

Advertisement

ಕಾರವಾರ /ಭಟ್ಕಳ (17ಸೆಪ್ಪೆಂಬರ್ 2026) :- ಗಣಪತಿ ವಿಸರ್ಜನೆ ವೇಳೆ ಮಸೀದಿ ಹಾಗೂ ಮದರಾಸಾಗಳಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ(bhatkal)  ನಡೆದಿದ್ದು  ಮುರಿನ ಕಟ್ಟೆ ಪ್ರಕರಣದ ನಂತರ ಇದೀಗ ಭಟ್ಕಳದಲ್ಲಿ ಮತ್ತೆ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಭಟ್ಕಳದ (bhatkal)ಸಾರ್ವಜನಿಕ ಗಣೇಶೋತ್ಸವ ಸಮಿತಿ ತಲಾಂದ ವತಿಯಿಂದ ಬುಧವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ ಗಾಜುಗಳಿಗೆ ಹಾನಿ ಮಾಡಲಾಗಿದೆ.ಈ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಂದರು ರಸ್ತೆ 5ನೇ ಕ್ರಾಸ್ ನಿವಾಸಿ ಅಬ್ದುಲ್ ಅಲಿಂ (67), ಶಾಹುಲ್ ಅಮೀನ್ ಗವಾಯಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಖಂಡಿಸಿ ಮುಸ್ಲಿಂ ಸಮುದಾಯದವರು ಠಾಣೆ ಎದುರು ಜಮಾಯಿಸಿ, ಆರೋಪಿತರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:-Bhatkal| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರುಪಾಯಿ ವಂಚನೆ

ದೂರಿನಲ್ಲಿ ತಿಳಿಸಿರುವಂತೆ, ತಲಾಂದದಿಂದ ಆರಂಭಗೊಂಡ ಗಣೇಶ ವಿಸರ್ಜನಾ ಮೆರವಣಿಗೆ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದ ಪ್ರಥಮ ಮಹಡಿಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲುಗಳನ್ನು ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಕಲ್ಲು ತೂರಾಟದಿಂದ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಒಡೆದು ಹಾನಿಯಾಗಿವೆ ಎಂದು ಆರೋಪಿಸಲಾಗಿದೆ. ಈ ಕೃತ್ಯದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ವಿವಿಧ ವರ್ಗಗಳ ನಡುವೆ ದ್ವೇಷಕ್ಕೆ ಕಾರಣವಾಗಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ಉದ್ದೇಶದಿಂದ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅಬ್ದುಲ್ ಅಲಿಂ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮಸೀದಿ ಮೇಲೆ ಕಲ್ಲು ತೂರಾಟ ನಡೆದಿರುವ ವಿಷಯ ತಿಳಿಯುತ್ತಿದ್ದಂತೆ ಮುಸ್ಲಿಂ ಸಮುದಾಯದ ನೂರಾರು ಜನರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದರು. ಘಟನೆಗೆ ಕಾರಣರಾದವರನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ:-bhatkal| ಬಾವಿಗೆ ಬಿದ್ದ ಚಿರತೆ ರಕ್ಷಣೆ ವಿಡಿಯೋ ನೋಡಿ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಠಾಣೆಗೆ ಕರೆಸಿಕೊಂಡು ಪೊಲೀಸರು ವಿಚಾರಣೆ ನಡೆಸಲಾಗಿದೆ. ಸಧ್ಯ ಭಟ್ಕಳದಲ್ಲಿ ಭೂದಿ ಮುಚ್ಚಿದ ಕೆಂಡದಂತಹ ವಾತಾವರಣ ವಿದ್ದು ,ಬಿಗು ಪೊಲೀಸ್ ಬಂದವಸ್ತ್ ಕಲ್ಪಿಸಲಾಗಿದ್ದು ,ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್.,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಎ.ಎಸ್.ಪಿ. ರಾನು ಗುಪ್ತ, ಮೊಕ್ಕಾಂ ಹೂಡಿದ್ದು ಸಿಪಿಐ ದಿವಾಕರ ಪಿ.ಎಂ. ಹಾಗೂ ಪಿಎಸ್‌ಐ ನವೀನ ನಾಯ್ಕ ತನಿಖೆ ಚುರುಕು ಗೊಳಿಸಿದ್ದಾರೆ.

Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement