BREAKING NEWS
Search

Instagram ನಲ್ಲಿ ಗೆಳೆಯನ ಕಿರುಕುಳ : ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಭಟ್ಕಳದ ಯುವತಿ

241

ಕಾರವಾರ :- ಇನ್ಸ್ಟಾಗ್ರಾಮ್ ನಲ್ಲಿ ಪ್ರೀತಿಸಿದ ಗೆಳೆಯನ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಮಕ್ಕಿ, ಹಾಡವಳ್ಳಿಯಲಿ ನಡೆದಿದೆ.
ಮೃತ ಯುವತಿಯನ್ನು ನೇತ್ರಾ ಮುತ್ತಯ್ಯ ಗೋವಾಳಿ ಎಂದು ತಿಳಿದು ಬಂದಿದೆ .

ಈಕೆ ಭಟ್ಕಳದಲ್ಲಿ ವಕೀಲರ ಕಛೇರಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಕಿರುಕುಳ ನೀಡಿದ ಆರೋಪಿ ಮುಂಡಳ್ಳಿ ನಿವಾಸಿ ಗೋವರ್ಧನ ಮೊಗೇರ ಎಂದು ಗುರುತಿಸಲಾಗಿದ್ದು ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ ನಂತರ ಈ ಪರಿಚಯ ಪ್ರೀತಿಗೆ ತಿರುಗಿದೆ. ಇನ್ನೂ ಇಬ್ಬರೂ ಸುತ್ತಾಡಿದ್ದಾರೆ ಎಂದು ಹೇಳಲಾಗಿದ್ದು ನಂತರ ಇಬ್ಬರ ನಡುವೆ ಬಿರುಕು ಬಿಟ್ಟಿತ್ತು. ಹೀಗಾಗಿ ತಾನು ನಿನಗೆ ಖರ್ಚು ಮಾಡಿದ ಹಣ ಕೊಡುವಂತೆ ಹೇಳಿ ಕರೆ ಮಾಡಿ ಹೆದರಿಸಿ ಚಿತ್ರಹಿಂಸೆ ನೀಡಿದ್ದಲ್ಲದೇ, ನಿನ್ನ ಅಶ್ಲೀಲ ಫೋಟೋಗಳನ್ನು ತಾನು ಫೇಸ್ಬುಕ್ ನಲ್ಲಿ ಹಾಕಿ ನಿನ್ನ ಮಾನ ಮರ್ಯಾದೆ ತೆಗೆದು ನಿನಗೆ ಸಾಯಿಸುತ್ತೇನೆ’ ಇಲ್ಲಾದರೆ ಮರ್ಯಾದೆಗೆ ನೀನೆ ಸಾಯಬೇಕು ಎಂದು ಹೇಳ ಪ್ರಚೋದನೆ ನೀಡಿದ್ದಾನೆ. ಮನನೊಂದ ಯುವತಿ ತನ್ನ ಹಳೆಯ ಮನೆಯಲ್ಲಿ ಕುತ್ತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಆರೋಪಿ ಗೋವರ್ಧನ ಮೊಗೇರ ತನ್ನ ಮಗಳ ಸಾವಿಗೆ ಈತನೇ ಕಾರಣ ಎಂದು ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೃತ ಯುವತಿಯ ತಂದೆ ಮುತ್ತಯ್ಯ ಗೋವಾಳಿ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪಿ.ಎಸ್.ಐ ಶ್ರೀಧರ ನಾಯ್ಕ ಮೃತ ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!