Bhatkal| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರುಪಾಯಿ ವಂಚನೆ

Bhatkal:ಭಟ್ಕಳದಲ್ಲಿ ವಿದೇಶಿ ಉದ್ಯೋಗದ ಆಮಿಷ: ₹2.49 ಲಕ್ಷ ಹಾಗೂ ಪಾಸ್‌ಪೋರ್ಟ್ ಪಡೆದು ವಂಚನೆ, ಮೂವರ ವಿರುದ್ಧ ಪ್ರಕರಣ ವಿವರ ನೋಡಿ
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಮತ್ತು ಪಾಸ್‌ಪೋರ್ಟ್ ಪಡೆದು ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಸಾಂಕೇತಿಕ ಚಿತ್ರ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಮತ್ತು ಪಾಸ್‌ಪೋರ್ಟ್ ಪಡೆದು ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಸಾಂಕೇತಿಕ ಚಿತ್ರ

Bhatkal| ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರುಪಾಯಿ ವಂಚನೆ.

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ₹2.49 ಲಕ್ಷ ಹಣ ಹಾಗೂ ಪಾಸ್‌ಪೋರ್ಟ್ ಪಡೆದು ವಂಚನೆ ನಡೆಸಿರುವ ಆರೋಪದಡಿ ಭಟ್ಕಳ(bhatkal) ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ ತಾಲೂಕಿನ ಕಾಯ್ಕಿಣಿ ಗ್ರಾಮದ ಜನತಾ ಕಾಲೋನಿಯ ನಿವಾಸಿ, 24 ವರ್ಷದ ಅನಿಲ್‌ ಮಂಜಯ್ಯ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಭಟ್ಕಳದ ಮಹಮದ್ ಅಯೂಬ್ ಅಲಿ, ಅಬ್ದುಲ್‌ ಮುತಾಲಿಬ್ ಕುಂದನಗೂಡ ಹಾಗೂ ಅಲ್ತಾಫ್ ಎಂಬ ಮೂವರು ಸೇರಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಅನಿಲ್ ಅವರಿಂದ ₹2.49 ಲಕ್ಷ ಹಣ ಹಾಗೂ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:-Bhatkal|ಚಿಪ್ಪೆಕಲ್ಲು ದುರಂತದಲ್ಲಿ ತಾಯಿ ಸಾವು -ಮನನೊಂದಿದ್ದ ಮಗನ ಬದುಕು ದುರಂತ ಅಂತ್ಯ

Advertisement

ಆದರೆ, ಹಣ ಮತ್ತು ಪಾಸ್‌ಪೋರ್ಟ್ ಪಡೆದ ಬಳಿಕ ಉದ್ಯೋಗ ಕೊಡಿಸದೇ, ನಕಲಿ ಉದ್ಯೋಗ ಸಂಬಂಧಿತ ದಾಖಲೆಗಳನ್ನು ತೋರಿಸಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಹಣ ಮತ್ತು ಪಾಸ್‌ಪೋರ್ಟ್ ಅನ್ನು ಇದುವರೆಗೆ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ.

ಇದನ್ನೂ ಓದಿ:-Bhatkal- ಸಾಲ ನೀಡಿದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ

ಈ ಹಿಂದೆ ಕೂಡ ಭಟ್ಕಳದಲ್ಲಿ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ,ಉದ್ಯೋಗಾಕಾಂಕ್ಷಿಗಳ ಬಳಿ ಹತ್ತು ಲಕ್ಷಕ್ಕೂ ಹೆಚ್ಚು ವಂಚನೆ ಮಾಡಲಾಗುತ್ತು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement