ಭಟ್ಕಳ:ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕಾರು ಪಲ್ಟಿ; ಓರ್ವ ಸಾವು, ಮೂವರು ಗಂಭೀರ

752

ಕಾರವಾರ:- ನಾಲ್ವರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಭಟ್ಕಳ ತಾಲೂಕಿನ ಮೂಡಭಟ್ಕಳ ಬೈಪಾಸ್ ಬಳಿ ನಡೆದಿದೆ.

ಕಾರು ಚಾಲಕನಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ರಂಗಿನಕಟ್ಟೆಯ ಉನೈಜ್‌ ಹಮ್ಜದ್ ಖತೀಬ್ (20) ಮೃತ ಯುವಕ. ಈತ ತನ್ನ ಮೂವರು ಎಂಜಿನಿಯರಿಂಗ್ ಸಹಪಾಠಿಗಳೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದು ರಸ್ತೆಯ ಬಲ ಭಾಗಕ್ಕೆ ಹೋಗಿ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರು ಪಲ್ಟಿಯಾಗಿದೆ.

ಆರ್ಟಿಕಲ್ 370 ರದ್ದು ಪ್ರಶ್ನಿಸಿ 20 ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ ನಲ್ಲಿ!
ಒಂದು ವಾರದ ಬಳಿಕ ವಿಚಾರಣೆ- ಸಿಜೆಐ

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಎರಡು ಚಕ್ರಗಳು ನೂರು ಮೀಟರ್ ದೂರಕ್ಕೆ ಹೋಗಿಬಿದ್ದಿದೆ. ಅಲ್ಲದೇ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಹಾರಿ ರಸ್ತೆಯ ಫಲಕವೊಂದಕ್ಕೆ ಡಿಕ್ಕಿಯಾದ ಪರಿಣಾಮ ಫಲಕ ಕೂಡ ನೆಲಕ್ಕುರುಳಿದೆ.

ಈ ಬಗ್ಗೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-

ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಹಿಂಸಾತ್ಮಕವಾಗಿ ಹಿಡಿದು ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಹಳಿಯಾಳ ಪುರಸಭೆ ಸಿಬ್ಬಂದಿ!
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!