BREAKING NEWS
Search

ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅಸ್ತಂಗತ.

884

ನ್ಯೂಸ್ ಡೆಸ್ಕ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ.


ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ  ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡಿಸ್ ಗುರುತಿಸಿಕೊಂಡಿದ್ದರು.

ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫರ್ನಾಂಡಿಸ್ ಅವರು ಸಹ ಒಬ್ಬರಾಗಿದ್ದರು. ಯಾವುದೇ ಬ್ರಷ್ಟಾಚಾರವಿಲ್ಲದೇ ಶುದ್ಧ ಹಸ್ತರಾಗಿದ್ದ ಅವರು ತಮ್ಮ ಪ್ರಮಾಣಿಕತೆ,ಸರಳತೆ ಮೂಲಕ ಹೆಸರು ಮಾಡಿದ್ದರು.

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕೆಲಸ ಮಾಡಿದ್ದ ಅವರು ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದರು. ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ 2004ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!