Karwar|ಫೆ.22ಕ್ಕೆ ಸಿಎಂ ಸಿದ್ದರಾಮಯ್ಯ |ಏನೆಲ್ಲಾ ಕಾರ್ಯಕ್ರಮ ವಿವರ ನೋಡಿ
ಕಾರವಾರ :-ಫೆಬ್ರವರಿ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಲಿದ್ದು ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
Karwar ನ್ಯಾಯಾಲಯ ಸ್ಪೋಟಿಸುವ ಬಾಂಬ್ ಬೆದರಿಕೆ ಮೇಲ್ – ಕೋರ್ಟ ಕಲಾಪ ಮುಂದೂಡಿಕೆ.
ಇನ್ನು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು. ಸಭೆಯಲ್ಲಿ ಜಿ.ಪಂ. ಸಿಇಓ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝೂಫಿಶಾನ್ ಹಕ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಫೆ.22 ರಂದು ಸಂತೆ ತಾತ್ಕಾಲಿಕ ಸ್ಳಳಾಂತರ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಕಾರವಾರ ನಗರ (karwar) ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಕಾರವಾರ ವೈದ್ಯಕೀಯ ಸಂಸ್ಥೆಯಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಸಿ.ಎಂ ಪ್ರವಾಸದ ಹಿನ್ನಲೆಯಲ್ಲಿ ಸಂಚಾರಕ್ಕೆ ಯಾವುದೇ ಅಡತಡೆಯಾಗದಂತೆ ಮುಕ್ತ ಸಂಚಾರಕ್ಕೆ ಅನುವು ಮಾಡುವ ಸಲುವಾಗಿ ಫೆ.22 ರಂದು ನಡೆಯುವ ಸಂತೆಯನ್ನು ದೋಭಿಘಾಟ ರಸ್ತೆಗೆ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ.








