ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಲಸಿಕೆ ಪಡೆದುಕೊಂಡವರಲ್ಲೂ ಬಂತು ಕರೋನಾ ಪಾಸಿಟಿವ್!

2763

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಸೋಂಕು ವ್ಯಾಪಕವಾಗಿದ್ದು ,ಈ ಹಿಂದೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ವರದಿ ಬೆನ್ನಲ್ಲೇ ಜಿಲ್ಲೆಯ “ಕ್ರಿಮ್ಸ್ ವೈದ್ಯಕೀಯ ವಿಜ್ಞಾನ ಕಾಲೇಜು” ವಿದ್ಯಾರ್ಥಿಗಳಿಗೂ ಕರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕಾರವಾರ ಮೆಡಿಕಲ್ ಕಾಲೇಜಿನ 27 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸುಮಾರು 450 ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಪರೀಕ್ಷೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಅಂತಿಮ ಎಂಬಿಬಿಎಸ್‍ನ ಸುಮಾರು 150 ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ಮುಂದುವರೆದಿದೆ.

ಕಾಲೇಜಿನ ಮೂವರು ವಿದ್ಯಾರ್ಥಿನಿಯರಿಗೆ ಎರಡು ದಿನಗಳ ಹಿಂದೆ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸಲಾಯಿತು. ಪ್ರಥಮ ಮತ್ತು ದ್ವಿತೀಯ ವರ್ಷದ 24 ಎಂಬಿಬಿಎಸ್ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಕಾಲೇಜಿನ ಉಳಿದ ಬಹುತೇಕ ವಿದ್ಯಾರ್ಥಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಈ ಪೈಕಿ ಅಂತಿಮ ಎಂಬಿಬಿಎಸ್‍ನ 150 ವಿದ್ಯಾರ್ಥಿಗಳಿಗೆ ಏ. 18ರಿಂದ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಅವರನ್ನು ಉಳಿಸಿಕೊಳ್ಳಲಾಗಿದ್ದು ,ನೆಗೆಟಿವ್ ವರದಿ ಬಂದ ಉಳಿದ ಎಲ್ಲ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ ಎಂದು ಕಾಲೇಜಿನ ನಿರ್ದೇಶಕ ಡಾ. ಗಜಾನನ ನಾಯಕ ಅವರು ಪಬ್ಲಿಕ್ ಟಿ.ವಿಗೆ ಮಾಹಿತಿ ನೀಡಿದರು.

ಲಸಿಕೆ ತೆಗೆದುಕೊಳ್ಳದ ಅಸಡ್ಡೆ ತಂತು ಕುತ್ತು! ಲಸಿಕೆ ಪಡೆದವರಿಗೂ ಕರೋನಾ ಪಾಸಿಟಿವ್

ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಲಸಿಕೆ ಪಡೆದಿರಲಿಲ್ಲ, ಅಲ್ಲದೇ ಬಿಡುವಿನ ಸಮಯದಲ್ಲಿ ಮೋಜು ಮಸ್ತಿ ಎಂದು ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಹಾಗೂ ಇತರ ಪ್ರದೇಶಗಳಿಗೆ ಈ ವಿದ್ಯಾರ್ಥಿನಿಯರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಸೋಂಕು ತಗುಲಿದ್ದು ,ಇವರ ಸಂಪರ್ಕ ಮಾಡಿದ ವಿದ್ಯಾರ್ಥಿಗಳಿಗೆ ಸೊಂಕು ತಗುಲಿದೆ.

ಇನ್ನು ಇವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದನಂತರ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಲಸಿಕೆಯ ಮೊದಲ ಡೋಸ್ ಪಡೆದಿರುವ 24 ವಿದ್ಯಾರ್ಥಿಗಳಲ್ಲೂ ಸೋಂಕು ಪತ್ತೆಯಾಗಿದೆ.

ಆದರೆ ಈ ಲಸಿಕೆ ಪಡೆದ ವಿದ್ಯಾರ್ಥಿಗಳಲ್ಲಿ ಯಾವುದೇ ತರಹದ ರೋಗ ಲಕ್ಷಣವೂ ಇರಲಿಲ್ಲ. ಆರೋಗ್ಯ ಸ್ಥಿತಿ ತೀರಾ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಲಸಿಕೆ ಅತ್ಯಂತ ಪರಿಣಾಮಕಾರಿಯಾಗಿರುವುದು ಕಂಡುಬಂದಿದೆ ಎಂದು ಕಾಲೇಜಿನ ಅಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಇಂದು 66 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,250 ಕ್ಕೆ ಏರಿಕೆ ಕಂಡಿದೆ.

ತಾಲೂಕುವಾರು ವಿವರ ನೋಡಿ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!