BREAKING NEWS
Search

18 ವರ್ಷದ ಯುವತಿಗೆ ಮಂಗನಕಾಯಿಲೆ| ಶರಾವತಿ ಹಿನ್ನೀರಿನ ಭಾಗದಲ್ಲಿ ಆತಂಕ!

55

shivamogga: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ 18 ವರ್ಷದ ಯುವತಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಇಲಾಖೆ ( health department) ಮಾಹಿತಿ ನೀಡಿದೆ.

ಇದನ್ನೂ ಓದಿ:- ಸಿಗಂದೂರು ಜಾತ್ರೆ ದಿನಾಂಕ ನಿಗದಿ-ಯಾವೆಲ್ಲಾ ಕಾರ್ಯಕ್ರಮ ವಿವರ ನೋಡಿ.

ಅನಾರೋಗ್ಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಶುಕ್ರವಾರ ಸಂಜೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಿದ್ದು ಈಕೆಯ ಸ್ಥಿತಿ ಗಂಭೀರವಾಗಿದೆ.
ಆರೋಗ್ಯ ಇಲಾಖೆ ಮಾಹಿತಿಯಂತೆ ಶರಾವತಿ ಹಿನ್ನೀರಿನ ಭಾಗದಲ್ಲಿ ನೀರಿನ ಪ್ರಮಾಣ ತಗ್ಗಿದ್ದು ಈ ಭಾಗದ ಪ್ರಾಣಿಗಳಿಂದ ವೈರಾಣು ಹಬ್ಬಿರುವ ಸಂಶಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ,ಉತ್ತರ ಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಕಳೆದಬಾರಿ ಸಹ ಮಂಗನ ಕಾಯಿಲೆ ಪತ್ತೆಯಾಗಿತ್ತು.ಇದರ ಜೊತೆ ಸಾವು ಸಹ ಸಂಭವಿಸಿದ್ದು ಇದೀಗ ಎರಡು ಜಿಲ್ಲೆಯಲ್ಲೂ ಮಂಗನಕಾಯಿಲೆ ಪತ್ತೆಯಾಗಿದೆ.

ಇದನ್ನೂ ಓದಿ:-( ಫೋಟೋದ ಮೇಲೆ ಕ್ಲಿಕ್ ಮಾಡಿ)




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!