
ಕಾರವಾರ:- ಬೆಳಗಾವಿಯಲ್ಲಿ ಅಧಿವೇಶನಕ್ಕೆ ತೊಂದರೆ ನೀಡುವ ಹಾಗೂ ಕೊಲ್ಲಾಪುರದಲ್ಲಿ ಕನ್ನಡ ದ್ವಜವನ್ನು ಸುಟ್ಟುಹಾಕಿ ಪುಂಡಾಟಿಕೆ ಮಾಡಿದ ಎಂ.ಇ.ಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಎಮ್.ಇ.ಎಸ್ ಸಂಘಟನೆಯ ದ್ವಜವನ್ನು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಸುಟ್ಟುಹಾಕಿ ಪ್ರತಿಭಟನೆ ನಡೆಸಿದರು.
ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಪಂತೋಜಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ಸದಸ್ಯರು, ಬೆಳಗಾವಿಯಲ್ಲಿ ರಾಜ್ಯ ಸರ್ಕಾರ ಪ್ರತಿಬಾರಿ ಚಳಿಗಾಲದ ಅಧಿವೇಶನ ನಡೆಸುವ ಸಂದರ್ಭದಲ್ಲಿ ಎಂ.ಇ.ಎಸ್ ಸಂಘಟನೆಗಳು ಇಲ್ಲಸಲ್ಲದ ತಕರಾರು ತೆಗೆದು ಅಧಿವೇಶ ಅಡ್ಡಿ ಪಡಿಸುವ ಕೆಲಸ ಮಾಡುತ್ತಿದೆ.


ಹೀಗಾಗಿ ಈ ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧಿಸಬೇಕು ಹಾಗೂ ಕನ್ನಡಿಗರ ಪರ ಹೋರಾಟ ಮಾಡುತ್ತಿರುವ ಕನ್ನಡ ಸಂಘಟನೆಯ ಸಂಪತ್ ಕುಮಾರ್ ದೇಸಾಯಿ ಹಾಗೂ ಅವರ ತಂಡದ ವಿರುದ್ಧ ಎಂ.ಇ.ಎಸ್ ಮುಖಂಡರಿಗೆ ಮಸಿ ಬಳಿದ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ಕೊಲೆಯತ್ನ ದ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯದ ಮುಖ್ಯಮಂತ್ರಿ ಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರವನ್ನು ನೀಡಿದರು.