Dandeli |ರೈಲ್ವೆ ಬ್ರಿಡ್ಜ್ ಕಾಮಗಾರಿವೇಳೆ ಮಣ್ಣು ಕುಸಿತ ರೈಲ್ವೆ ಸಿಬ್ಬಂದಿ ಸಾವು -ಓರ್ವ ಗಂಭೀರ 

Railway underbridge construction site near Barchi Karka road in Dandeli where a soil collapse killed one railway employee and seriously injured another Railway underbridge construction site near Barchi Karka road in Dandeli where a soil collapse killed one railway employee and seriously injured another
Railway underbridge construction site near Barchi Karka road in Dandeli where a soil collapse killed one railway employee and seriously injured another

Dandeli |ರೈಲ್ವೆ ಬ್ರಿಡ್ಜ್ ಕಾಮಗಾರಿವೇಳೆ ಮಣ್ಣು ಕುಸಿತ ರೈಲ್ವೆ ಸಿಬ್ಬಂದಿ ಸಾವು -ಓರ್ವ ಗಂಭೀರ

ಕಾರವಾರ : ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತಿದ್ದ ವೇಳೆ ಏಕಾ ಏಕಿ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಉದ್ಯೋಗಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿ, ಇನ್ನೋರ್ವ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬರ್ಚಿ – ಕರ್ಕಾ ರಸ್ತೆಯ ಬೇಡರ ಶಿರಗೂರು ಹತ್ತಿರ ನಿನ್ನೆ ತಡ ರಾತ್ರಿ ನಡೆದಿದೆ. Dandeli | ದಾಂಡೇಲಿ ಉರುಗ ರಕ್ಷಕ ರಜಾಕ್ ಶಾಕ್ ಗೆ ಅರಣ್ಯ ಇಲಾಖೆ ನೋಟಿಸ್ – ಪರಿಸರ ಪ್ರೇವಿಗಳಿಂದ ಪ್ರಕರಣ ದಾಖಲಿಸುವ ಎಚ್ಚರಿಕೆ .

ಅಳ್ನಾವರ-ಅಂಬೇವಾಡಿ ಸೆಕ್ಷನ್‌ನ ಎಲ್‌ಸಿ ನಂ.11 ರಲ್ಲಿ ದಾಂಡೇಲಿ(dandeli) ತಾಲೂಕಿನ ಕರ್ಕಾ – ಬರ್ಚಿ ರೈಲ್ವೆ ಮಾರ್ಗದಲ್ಲಿ ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ತೆಗೆದು ಹಾಕಿದ್ದ ಮಣ್ಣು ಕುಸಿದಿದೆ. ಈ ಸಂದರ್ಭದಲ್ಲಿ ಅಲ್ಲೇ ಕೆಲಸ ನಿರ್ವಹಿಸುತ್ತಿದ್ದ ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ ಹಾಗೂ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ನಿವಾಸಿ ಮಹೇಶ ಶೇಖಪ್ಪ ತಳವಾರ ( 33) ಅವರ ಮೇಲೆ ಮಣ್ಣು  ಬಿದ್ದ ಪರಿಣಾಮವಾಗಿ ಮಣ್ಣಿನಲ್ಲಿ ಸಿಲುಕಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ರೈಲ್ವೆ ಇಲಾಖೆಯ ಹಿರಿಯ ಸೆಕ್ಷನ್ ಅಭಿಯಂತರ ಹಾಗೂ ಗದಗ ರಾಜೀವ್ ಗಾಂಧಿನಗರದ ನಿವಾಸಿಯಾಗಿರುವ ಮಕ್ತುಂ ಹುಸೇನ್ ಮಹಮ್ಮದ್ ಹುಸೇನ್ ಮುಲ್ಲಾ (57) ಎಂಬವರಿಗೆ ಗಂಭೀರ ಗಾಯವಾಗಿದೆ ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ್ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಸುದ್ದಿ ತಿಳಿದು ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಗಾಯಗೊಂಡ ಸಿಬ್ಬಂದಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement