ಬೆಳಗಾವಿಯಲ್ಲಿ ಡಿ.13ರಿಂದ 24ವರೆಗೆ ವಿಧಾನಮಂಡಲ ಅಧಿವೇಶನ ಕ್ಕೆ ರಾಜ್ಯಪಾಲರಿಂದ ಅಧಿಸೂಚನೆ.

454

ಬೆಂಗಳೂರು: ಡಿಸೆಂಬರ್‌ 13 ರ ಸೋಮವಾರ ಬೆಳಿಗ್ಗೆ 11 ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಪ್ರವಾಹ ಮತ್ತು ಕೋವಿಡ್‌ ಕಾರಣ ಕಳೆದ ಎರಡು ವರ್ಷಗಳಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿರಲಿಲ್ಲ. ಇದೀಗ ಕೋವಿಡ್‌ ಪ್ರಕರಣಗಳು ಕಡಿಮೆ ಆಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.

13ರಿಂದ 24ವರೆಗೆ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದ್ದು, 10 ದಿನ ಕಲಾಪ ನಡೆಯಲಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!