Delhi Fire Accident | ದಕ್ಷಿಣ ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; 21 ಮಂದಿ ದುರ್ಮರಣ.

ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Delhi fire news Delhi fire news
ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Delhi Fire Accident | ದಕ್ಷಿಣ ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; 21 ಮಂದಿ ದುರ್ಮರಣ.

ನವದೆಹಲಿ: ದಕ್ಷಿಣ ದೆಹಲಿಯ (Delhi) ಮಾಳವೀಯ ನಗರ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತರಲ್ಲಿ ವಿದೇಶಿ ಪ್ರಜೆಗಳೂ ಸೇರಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Costal Karnataka 61 ದಿನ ಮೀನುಗಾರಿಕೆ ಬಂದ್ -ಅವಧಿ ವಿಸ್ತರಣೆಗೆ ಆಗ್ರಹ
ಮಂಗಳವಾರ ಬೆಳಿಗ್ಗೆ ಸುಮಾರು 8:50ರ ವೇಳೆಗೆ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಅದು ಮೇಲಿನ ಮಹಡಿಗಳಿಗೂ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಹಾಗೂ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದರು.

ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದುವರೆಗೆ 37 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ಎರಡು ಲಕ್ಷ ಪರಿಹಾರ ಘೋಷಣೆ.

ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: 21 ಸಾವು, ಹಲವರಿಗೆ ಗಾಯ
ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: 21 ಸಾವು, ಹಲವರಿಗೆ ಗಾಯ

ಘಟನೆಯ ಕುರಿತು ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸಂತ್ರಸ್ತರಿಗೆ ಅಗತ್ಯ ವೈದ್ಯಕೀಯ ನೆರವು ಮತ್ತು ಇತರೆ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ದೆಹಲಿಯ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ – ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಸ್ಥಳೀಯರ ಪ್ರಕಾರ, ಆರು ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ಮೇಲಿನ ಮಹಡಿಗಳಿಗೆ ವೇಗವಾಗಿ ಹರಡಿಕೊಂಡಿದೆ. ಘಟನಾ ಸ್ಥಳದಲ್ಲಿ ಸುಮಾರು ಹತ್ತು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

Karnataka ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ|ಡಿಕೆಗೆ ಪಟ್ಟ-ಯುವ ಸಚಿವ ಸಂಪುಟಕ್ಕೆ ಸಿದ್ದತೆ
ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement