ಜಿಎಸ್ ಪಾಟೀಲ್ ಗೆ ಸ್ಪೀಕರ್ ಪಟ್ಟ – ಡಿಕೆಶಿ ಸಂಪುಟದಲ್ಲಿ ಯಾರಿಗೆ ಮಂತ್ರಿಗಿರಿ?.

ಬೆಂಗಳೂರು :-ರಾಜ್ಯ ರಾಜಕೀಯದಲ್ಲಿ ಬಹಳ ದಿನಗಳಿಂದ ಚರ್ಚೆಯಾಗುತ್ತಿದ್ದ ಸಚಿವ ಸಂಪುಟ ವಿಸ್ತರಣೆಗೆ ಇದೀಗ ಅಂತಿಮ ರೂಪ ಸಿಕ್ಕಿದೆ ಎನ್ನಲಾಗಿದ್ದು, ಸ್ಪೀಕರ್ ಹುದ್ದೆಗೂ ಹೆಸರು ಅಂತಿಮಗೊಂಡಿರುವ ಮಾಹಿತಿ ಹೊರಬಿದ್ದಿದೆ. ಹಾಗಾದರೆ ಹೊಸ ಸಚಿವರ ಪಟ್ಟಿಯಲ್ಲಿ ಯಾರ್ಯಾರಿಗೆ ಅವಕಾಶ ಸಿಕ್ಕಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಇದನ್ನೂ ಓದಿ:-DK ಗೆ ಪಟ್ಟ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಬದಲಾದ ರಾಜಕೀಯ| ಏನದು?
ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ತೆರೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಹೊಸ ಸಚಿವರ ಪಟ್ಟಿಗೆ ಒಪ್ಪಿಗೆ ದೊರೆತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಭೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸಿ ಅಂತಿಮ ಹಂತದ ಚರ್ಚೆ ನಡೆಸಿದ ಬಳಿಕ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಹಿರಿಯ ನಾಯಕ ಜಿ.ಎಸ್ ಪಾಟೀಲ್ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಕೂಡ ಹೊರಬಂದಿದೆ. ಈ ಹುದ್ದೆಗೆ ಇನ್ನೂ ಕೆಲವು ಹಿರಿಯ ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಕೊನೆಗೆ GS ಪಾಟೀಲರಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ಸೂಚಿಸುತ್ತಿವೆ.
ಯಾರಿಗೆ ಸಚಿವ ಪಟ್ಟ.
ಹೊಸ ಸಚಿವರ ಪಟ್ಟಿಯಲ್ಲಿ ಚಲುವರಾಯಸ್ವಾಮಿ, ಬಾಲಕೃಷ್ಣ, ರುದ್ರಪ್ಪ ಲಮಾಣಿ, ಎ.ಎಸ್. ಪೊನ್ನಣ್ಣ, ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ್, ಗಾಯತ್ರಿ ಶಾಂತೇಗೌಡ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಬಿ. ನಾಗೇಂದ್ರ, ಅಜಯ್ ಸಿಂಗ್, ಮಂಕಾಳ ವೈದ್ಯ ಹಾಗೂ ಪುಟ್ಟರಂಗ ಶೆಟ್ಟಿ ಸೇರಿದಂತೆ ಹಲವು ಶಾಸಕರಿಗೆ ಅವಕಾಶ ದೊರೆತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:-MankalsVaidya| ಬೀನಾ ವೈದ್ಯ ನನ್ನ ಉತ್ತರಾಧಿಕಾರಿ| ಇಬ್ಬರು ಮಕ್ಕಳ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದೇನು?
ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ನೂತನ ಸಚಿವರು ಅಧಿಕಾರ ಸ್ವೀಕರಿಸುವ ನಿರೀಕ್ಷೆಯಿದೆ. ಸಚಿವರಿಗೆ ಯಾವ ಯಾವ ಖಾತೆಗಳು ಸಿಗಲಿವೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಚಿವ ಸಂಪುಟದ ಹೊಸ ತಂಡ ಆಡಳಿತಕ್ಕೆ ಯಾವ ರೀತಿಯ ವೇಗ ನೀಡಲಿದೆ ಎಂಬುದನ್ನು ಕಾದುನೋಡಬೇಕಾಗಿದೆ.

