ಜಿಲ್ಲಾಪಂಚಾಯ್ತಿ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ:ಅಮೂಲ್ಯ ದಾಖಲೆಗಳು ಬೆಂಕಿಗಾಹುತಿ.

929

ಕಾರವಾರ :- ಷಾರ್ಟ ಸೆರ್ಕ್ಯೂಟ್ ನಿಂದ ಜಿಲ್ಲಾ ಪಂಚಾಯತಿ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾರವಾರದ ಎಂ.ಜಿ ರಸ್ತೆಯಲ್ಲಿರುವ ಜಿಲ್ಲಾ ಪಂಚಾಯ್ತಿ ಅಭಿಲೇಖಾಲಯವು ಇಂದು ಬೆಳಗ್ಗೆ ವಿದ್ಯುತ್ ಷಾರ್ಟ ಸೆರ್ಕ್ಯೂಟ್ ನಿಂದ ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. ಕಟ್ಟಡದ ಕೆಳಭಾಗದಲ್ಲಿ ಪೀಠೋಪಕರಣಗಳು,ಕಚೇರಿಯ ದಾಖಲೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ.


ಮೇಲ್ಭಾಗದ ಕಟ್ಟಡಕ್ಕೂ ಬೆಂಕಿ ಆವರಿಸಿದ್ದು ಅಲ್ಪ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದು ಅಂದಾಜು 2 ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿ.ಇ.ಓ ಪ್ರಿಯಾಂಗ ರವರು ಮಾಹಿತಿ ನೀಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!