BREAKING NEWS
Search

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಶಾಸಕ ಆರ್.ವಿ ದೇಶಪಾಂಡೆ ನೇಮಕ

79

ಕಾರವಾರ :- ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಶಾಸಕ ,ಮಾಜಿ ಸಚಿವ ಆರ್.ವಿ ದೇಶಪಾಂಡೆ ರವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ‌ .

ಈ ಹುದ್ದೆಗೆ ಸಂಪುಟ ದರ್ಜೆಯ ಸ್ಥಾನವನ್ನು ಸಹ ನೀಡಲಾಗಿದ್ದು ಹಿರಿಯ ಶಾಸಕರಾಗಿರುವ ಅವರಿಗೆ ಈ ಹಿಂದೆ ಸರ್ಕಾರ ರಚನೆ ವೇಳೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದ್ರೆ ಕಾಂಗ್ರೆಸ್ ಸರ್ಕಾರ ರಚನೆ ವೇಳೆ ಸಚಿವ ಸಂಪುಟದಿಂದ ಕೈ ಬಿಡಲಾಗಿತ್ತು.

ಇದನ್ನೂ ಓದಿ:- ಚಕ್ ಬೌನ್ಸ್ ಪ್ರಕರಣ- ಸಚಿವ ಮಧು ಬಂಗಾರಪ್ಪಗೆ ದಂಡ- ಜೈಲು ಶಿಕ್ಷೆ?!

ಆರ್.ವಿ ದೇಶಪಾಂಡೆಯವರು ಹಳಿಯಾಳ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ 9 ಬಾರಿ ಶಾಸಕರಾಗಿದ್ದು ,ಆರು ಅವಧಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!