ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ|ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

254

ನ್ಯೂಸ್ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಗಾಂಧಿನಗರದ ಸೂರತ್ ಜಿಲ್ಲಾ ಕೋರ್ಟ್ ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಹಿಂದಿನ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ರಾಹುಲ್‌ ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ತೀರ್ಪು ಪ್ರಕಟವಾಗುವ ಮೊದಲೇ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾಗಿದ್ದಾರೆ. ಈ ತೀರ್ಪನ್ನು ಪ್ರಶ್ನಿಸಿ ಜಾಮೀನು ಕೋರಿ ರಾಹುಲ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದು ಮೂವತ್ತು ದಿನಗಳ ಕಾಲ ಜಾಮೀನು ದೊರೆತಿದೆ.

ನಿರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನಹಾನಿ ದೂರು ದಾಖಲಿಸಿದ್ದರು.

ರಾಹುಲ್ ಗಾಂಧಿ ಟ್ವೀಟ್ !

ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಸತ್ಯವೇ ನನ್ನ ದೇವರು ಎನ್ನುತ್ತ ಮಹಾತ್ಮ ಗಾಂಧೀಜಿಯವರ ಸಾಲುಗಳನ್ನು ನೆನಪಿಸಿಕೊಂಡಿದ್ದಾರೆ.
ನನ್ನ ಧರ್ಮ ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು. ಅದನ್ನು ಪಡೆಯುವ ಸಾಧನ ಅಹಿಂಸೆ ಎಂಬ ಬಾಪೂಜಿಯವರ ಸಾಲನ್ನು ರಾಹುಲ್ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!