Karwar | ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕುಸಿ |ಎಲ್ಲಿ ಏನಾಯ್ತು ? ವಿವರ ನೋಡಿ

Ganeshgudi Ilava Landslide Ganeshgudi Ilava Landslide
Ganeshgudi Ilava Landslide

IMG 20260913 WA0009

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

Karwar Shetty Eye Hospital

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿ–ಇಳವಾ ಬಳಿ ಭೂಕುಸಿತ ಸಂಭವಿಸಿ, ರಾಮನಗರ–ಕಾರವಾರ(karwar) ರಾಜ್ಯ ಹೆದ್ದಾರಿಯಲ್ಲಿ ಕೆಲವು ಸಮಯ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ:-Karwar | ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಭರ್ಜರಿ ಕಪ್ಪಾ! MSIL ನಲ್ಲಿ ದರಕ್ಕಿಂತ ದುಬಾರಿಯಾದ ಮದ್ಯ! 

Advertisement

ಭೂಕುಸಿತದೊಂದಿಗೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಮೇಲೆ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ವಾಹನ ಸವಾರರು ಕೆಲವು ಕಾಲ ತೊಂದರೆ ಅನುಭವಿಸುವಂತಾಯಿತು.

ಸ್ಥಳೀಯ ಮಾಹಿತಿಯ ಪ್ರಕಾರ, ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ರೆಸಾರ್ಟ್‌ಗಳಿಗೆ ಬೆಟ್ಟದ ಮೇಲಿನಿಂದ ಪೈಪ್‌ಲೈನ್ ಮೂಲಕ ನೀರು ಸಾಗಿಸಲಾಗುತ್ತಿತ್ತು. ಈ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾಗಿರುವುದು ಹಾಗೂ ಬೆಟ್ಟದ ಮಣ್ಣು ಸಡಿಲಗೊಂಡಿರುವುದು ಭೂಕುಸಿತಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ:-Karwar |No ಡಿಜೆ.only ಮ್ಯೂಟ್ – ಜಿಲ್ಲಾ ಶಾಂತಿಪಾಲನಾ  ಸಭೆಯಲ್ಲಿ ಆಗಿದ್ದೇನು?ವಿಡಿಯೋ ನೋಡಿ.

ಘಟನೆಯ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಸುಗಮಗೊಳಿಸಲು ಮಣ್ಣು ಹಾಗೂ ಮರ ತೆರವು ಕಾರ್ಯ ಕೈಗೊಳ್ಳಲಾಗಿದೆ. ಮಳೆ ಮುಂದುವರಿದರೆ ಇದೇ ಭಾಗದಲ್ಲಿ ಮತ್ತಷ್ಟು ಮಣ್ಣು ಕುಸಿಯುವ ಸಾಧ್ಯತೆಯಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement