Goa ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾವು ಕಡಿದು ಸಾವು

Goa:-ಗೋವಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಹಾಗೂ ವೈದ್ಯ ಡಾ. ಕೇತನ್ ಭಾಟಿಕರ್ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ನಾಗರಹಾವು ಕಡಿದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಗೋವಾ ಕಾಂಗ್ರೆಸ್ ಅಭ್ಯರ್ಥಿ ಡಾ. ಕೇತನ್ ಭಾಟಿಕರ್ ಹಾವು ಕಡಿದು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ಪ್ರತಿಕಾತ್ಮಕ ಚಿತ್ರ ಗೋವಾ ಕಾಂಗ್ರೆಸ್ ಅಭ್ಯರ್ಥಿ ಡಾ. ಕೇತನ್ ಭಾಟಿಕರ್ ಹಾವು ಕಡಿದು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ಪ್ರತಿಕಾತ್ಮಕ ಚಿತ್ರ
ಗೋವಾ ಕಾಂಗ್ರೆಸ್ ಅಭ್ಯರ್ಥಿ ಡಾ. ಕೇತನ್ ಭಾಟಿಕರ್ ಹಾವು ಕಡಿದು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ಪ್ರತಿಕಾತ್ಮಕ ಚಿತ್ರ

Goa ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾವು ಕಡಿದು ಸಾವು.

Goa/ಕಾರವಾರ :- ಗೋವಾ (goa) ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೈದ್ಯ ಡಾ.ಕೇತನ್ ಭಾಟಿಕರ್ ಹಾವು ಕಡಿದು ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಬಳಿ ಕಾಡಿನಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಕಾಲಿಗೆ  ನಾಗರಹಾವು ಕಡಿದಿದೆ.

Goa |ಶಾಸಕ ಸತೀಶ್ ಸೈಲ್ ಪುತ್ರಿ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಗೆ ಆಯ್ಕೆ |ವಿಡಿಯೋ ನೋಡಿ.

Advertisement

ಪಕ್ಷದ ಖಾಸಗಿ ಮೀಟಿಂಗ್ ಗಾಗಿ ಗೋವಾದಿಂದ  ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಬಳಿಯ ಅನಮೋಡ್ ಕಡೆ ಸ್ನೇಹಿತನ ಜೊತೆ ತೆರಳಿದ್ದರು. ಈವೇಳೆ ಮೂತ್ರ ವಿಸರ್ಜನೆ ಮಾಡುವಾಗ ನಾಗರಹಾವು ಕಡಿದಿದೆ. ತಕ್ಷಣ ಅನಮೋಡ್ ನಿಂದ ಗೋವಾದ ಜಿ.ಎಮ್ .ಸಿ ಮೆಡಿಕಲ್ ಕಾಲೇಜಿನ (ಬಾಂಬೋಲಿನ್ ) ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಆದರೇ

ಚಿಕಿತ್ಸೆ ಫಲಿಸದೇ ಶುಕ್ರವಾರ ಸಾವು ಕಂಡಿದ್ದಾರೆ.ಘಟನೆ ಸಂಬಂಧ ಕೋಲಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋವಾದ ಕೃಷಿ ಸಚಿವ ಬಿಜೆಪಿಯ ರವಿ ನಾಯ್ಕ ಅಕಾಲಿಕ ನಿಧನದಿಂದ ತೆರವಾಗಿದ್ದ ಪೊಂಡಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ಡಾ.ಕೇತನ್ ಭಾಟಿಕರ್ ಗೆಲ್ಲುವ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದರು. ವೈದ್ಯರಾಗಿದ್ದ ಇವರು ಸಾಮಾಜಿಕ ಕಾರ್ಯದ ಮೂಲಕ ಹೆಸರು ಗಳಿಸಿದ್ದರು.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement