BREAKING NEWS
Search

ಕರೋನಾ ಆತಂಕ-ಗೋವಾದಲ್ಲಿ ಆಗಸ್ಟ್ 30 ರ ವರೆಗೆ ಕರ್ಫ್ಯೂ ಮುಂದುವರಿಕೆ

713

ಕಾರವಾರ/ಪಣಜಿ/: ಗೋವಾ ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಕಾಲಾವಧಿಯನ್ನು ಆಗಸ್ಟ್ 30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಭಾಗದ ಕಾರವಾರದ ಮಾಜಾಳಿ-ಗೋವಾ ಭಾಗದಲ್ಲೂ ಪ್ರವಾಸಿಗರಿಗೆ ನಿರ್ಬಂಧಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದ್ದು ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ.

ಗೋವಾದ ಚಿತ್ರಮಂದಿರಗಳಲ್ಲಿ ಶೇ 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಮೂಲಕ ಚಿತ್ರಮಂದಿರ ತೆರೆಯಲು ಅನುಮತಿ ನೀಡಲಾಗಿದೆ.

ಗೋವಾ ರಾಜ್ಯದಲ್ಲಿ ಕೋವಿಡ್‌ ಹರಡುವುದನ್ನು ತಡೆಯಲು ಮಾರ್ಚ್ ತಿಂಗಳಿಂದ ಜಾರಿಗೊಂಡಿದ್ದ ಕರ್ಫ್ಯೂ ವನ್ನು ಹಂತ ಹಂತವಾಗಿ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರಗಳ ಕಾಲ ಕರ್ಫ್ಯೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೇರಳದಿಂದ ಆಗಮಿಸುವ ಪ್ರವಾಸಿಗರಿಗೆ ಗೋವಾ ರಾಜ್ಯ ಪ್ರವೇಶಿಸಲು RTPCR ನೆಗೆಟಿವ್ ವರದಿ ಖಡ್ಡಾಯಗೊಳಿಸಲಾಗಿದ್ದು, ಇತರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ವರದಿ ಹೊಂದಿರುವುದು ಖಡ್ಡಾಯವಾಗಿದೆ.

ಇನ್ನು ಕಾರವಾರದಿಂದ ಗೋವಾಕ್ಕೆ ಪ್ರತಿದಿನ ತೆರಳುವ ವಾಹನ ಹಾಗೂ ಉದ್ಯೋಗಿಗಳಿಗೂ ಈ ನಿಯಮ ಜಾರಿ ಮಾಡಲಾಗಿದ್ದು ಇದೀಗ ಪ್ರತಿ ದಿನ ತೆರಳುವ ಜನರಿಗು ಸಹ ತೊಂದರೆಯಾಗುತ್ತಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!